ಗೋಣಿಕೊಪ್ಪಲು, ಮಾ. 5: ರಾಜ್ಯದಲ್ಲಿ ಜೆಡಿಎಸ್ ಅಧಿಕಾರಕ್ಕೆ ಬಂದರೆ ಎರಡು ಉಪಮುಖ್ಯಮಂತ್ರಿ ಸ್ಥಾನಗಳು ದಲಿತರಿಗೆ ಹಾಗೂ ಅಲ್ಪಸಂಖ್ಯಾತರಿಗೆ ಸಿಗಲಿದೆ ಎಂದು ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಹೊಸೂರು ಸತೀಶ್ ಜೋಯಪ್ಪ ಹೇಳಿದರು.
ನಾಪೋಕ್ಲು ಸಮೀಪದ ಅಯ್ಯಂಗೇರಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಜೆಡಿಎಸ್ ಮುಖಂಡರ ಸಭೆಯಲ್ಲಿ ಮಾತನಾಡಿದ ಸತೀಶ್ ಜೋಯಪ್ಪ ಮುಂದಿನ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿಗಳನ್ನು ಈಗಾಗಲೇ ಅಂತಿಮಗೊಳಿಸಿದ್ದು ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ ಹಾಗೂ ಕಾಂಗ್ರೆಸ್ನಲ್ಲಿ ಒಳ ಜಗಳದಿಂದ ಇನ್ನು ಕೂಡ ಜಿಲ್ಲೆಯಲ್ಲಿ ಅಭ್ಯರ್ಥಿಗಳು ಅಂತಿಮವಾಗಿಲ್ಲ. ಅಲ್ಪ ಸಂಖ್ಯಾತರು, ದಲಿತರು, ಹಿಂದುಳಿದವರು, ಒಟ್ಟಾದಲ್ಲಿ ಜೆಡಿಎಸ್ ಅಭ್ಯರ್ಥಿಗಳನ್ನು ಹೆಚ್ಚಿನ ಮತಗಳಿಂದ ಹಾರಿಸಿ ಕಳುಹಿ¸ Àಬಹುದು ಎಂದರು.
ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪಾಣತಲೆ ವಿಶ್ವನಾಥ್ ಮಾತನಾಡಿ ಪೊಲೀಸ್ ಇಲಾಖೆ ನಡೆಸಿರುವ ವರದಿಯಲ್ಲಿ ಮಡಿಕೇರಿ ಕ್ಷೇತ್ರದ ಅಭ್ಯರ್ಥಿ ಬಿ.ಎ.ಜೀವಿಜಯ ಈ ಬಾರಿ ಗೆಲ್ಲುವ ಅವಕಾಶವಿದೆ ವೀರಾಜಪೇಟೆ ತಾಲೂಕಿನ ಅಭ್ಯರ್ಥಿ ಸಂಕೇತ್ ಪೂವಯ್ಯ ಸತತ ಪರಿಶ್ರಮ ಬಡವರ ಮೇಲಿರುವ ಕಾಳಜಿ ಹಿನ್ನಲೆಯಲ್ಲಿ ಗೆದ್ದು ಬರಲಿದ್ದಾರೆ. ಎಲ್ಲಾ ಬೂತ್ ಮಟ್ಟದಲ್ಲಿ ಕಾರ್ಯಕರ್ತರನ್ನು ಒಗ್ಗೂಡಿಸಿ ತಕ್ಷಣದಿಂದ ಕಾರ್ಯಪ್ರವೃತ್ತರಾಗುವಂತೆ ಕರೆ ನೀಡಿದರು.
ವೀರಾಜಪೇಟೆ ವಿಧಾನಸಭಾ ಕ್ಷೇತ್ರಧ್ಯಕ್ಷ ಎಂ.ಎಚ್.ಮತೀನ್ ಅಧ್ಯಕ್ಷತೆ ವಹಿಸಿ ಮಾತನಾಡಿ ಕ್ಷೇತ್ರದಲ್ಲಿ ಪಕ್ಷ ಸಂಘಟನೆ ಉತ್ತಮವಾಗಿದೆ ಎಂದರು.
ರಾಜ್ಯ ಅಲ್ಪ ಸಂಖ್ಯಾತ ಘಟಕದ ಪ್ರಧಾನ ಕಾರ್ಯದರ್ಶಿ ಮನ್ಸೂರ್ ಆಲಿ,ಜೆಡಿಎಸ್ ಮುಖಂಡರಾದ ಪಿ.ಎ.ಅಬ್ದುಲ್ ಖಾದರ್,ಹಮೀದ್, ಅಶ್ರಫ್,ಬಶೀರ್, ಕೆ.ಎ.ಅಹಮ್ಮದ್, ಕುಯ್ಯಮುಡಿ ಸೀತಾರಾಮ್, ಮಹಮ್ಮದ್ ಮುಂತಾದವರು ಹಾಜರಿದ್ದರು.
ಹುಲಿತಾಳದಿಂದ ಜೆಡಿಎಸ್ ಚುನಾವಣಾ ಪ್ರಚಾರ ಆರಂಭ
ಜಿಲ್ಲೆ, ರಾಜ್ಯದಲ್ಲಿ ಬದಲಾವಣೆಯ ಕಾಲ ಸಮೀಪಿಸುತ್ತಿದ್ದು ಮುಂದಿನ ಚುನಾವಣೆಯಲ್ಲಿ ಪ್ರಾದೇಶಿಕ ಪಕ್ಷವಾದ ಜಾತ್ಯಾತೀತ ಜನತಾದಳದ ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿ ಮುಂದಿನ ಮುಖ್ಯಮಂತ್ರಿಯಾಗಲಿದ್ದಾರೆಂದು ಮಡಿಕೇರಿ ಹೋಬಳಿ ಜೆಡಿಎಸ್ ಅಧ್ಯಕ್ಷ ಮರಗೋಡು ಗ್ರಾಮ ಪಂಚಾಯ್ತಿ ಸದಸ್ಯರಾದ ಮುಂಡೋಡಿ ನಂದಾ ನಾಣಯ್ಯ ಆಶಾ ಭಾವನೆ ವ್ಯಕ್ತಪಡಿಸಿದರು.
ಹುಲಿತಾಳ ಗ್ರಾಮದ ಸಮುದಾಯ ಭವನದಲ್ಲಿ ಆಯೋಜನೆ ಗೊಂಡಿದ್ದ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ನಂದಾ ನಾಣಯ್ಯ ವೀರಾಜಪೇಟೆ ವಿಧಾನ ಸಭಾ ಕ್ಷೇತ್ರಕ್ಕೆ ಒಳಪಡುವ ಹಾಕತ್ತೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಹುಲಿತಾಳ ಗ್ರಾಮದಿಂದ ಜೆಡಿಎಸ್ನ ಅಭ್ಯರ್ಥಿ ಸಂಕೇತ್ ಪೂವಯ್ಯ ಚುನಾವಣಾ ಪ್ರಚಾರ ಕಾರ್ಯ ಆರಂಭವಾಗಿದೆ. ಉತ್ಸಾಹಿ ಯುವಕರು ಜೆಡಿಎಸ್ ಪಕ್ಷದತ್ತ ಮುಖ ಮಾಡಿದ್ದಾರೆ ಎಂದರು.
ಜಿಲ್ಲಾ ಜೆಡಿಎಸ್ನ ಪ್ರಧಾನ ಕಾರ್ಯದರ್ಶಿ, ಮರಗೋಡು ಗ್ರಾಮ ಪಂಚಾಯ್ತಿಯ ಅಧ್ಯಕ್ಷ ಬಿದ್ರುಪನೆ ಮೋಹನ್ ಮಾತನಾಡಿ ಸಾರಾಯಿ, ಲಾಟರಿ ನಿಷೇಧ ಮಾಡಿದ ಕುಮಾರ ಸ್ವಾಮಿ ಸರ್ಕಾರ ಈ ಬಾರಿ ರಾಜ್ಯದಲ್ಲಿ ಅಧಿಕಾರ ಹಿಡಿಯಲಿದೆ. ಮತದಾರರು ಈ ಬಾರಿಯ ಚುನಾವಣೆಯಲ್ಲಿ ಬದಲಾವಣೆ ತರಲಿದ್ದಾರೆ ಎಂದರು.
ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ, ಜಿಲ್ಲಾಧ್ಯಕ್ಷರಾದ ಸಂಕೇತ್ ಪೂವಯ್ಯ ಮಾತನಾಡಿ ಈ ಬಾರಿ ಜೆಡಿಎಸ್ ಪಕ್ಷದ ವರಿಷ್ಠರು ಚುನಾವಣೆಗೆ ಎರಡು ತಿಂಗಳ ಮೊದಲೇ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದ್ದಾರೆ. ಕ್ಷೇತ್ರವು ದೊಡ್ಡದಿರುವದರಿಂದ ಎಲ್ಲಾ ಮತಗಟ್ಟೆಗಳಿಗೂ ಭೇಟಿ ನೀಡುವ ಅವಕಾಶ ಲಭ್ಯವಾಗಿದೆ. ಜಿಲ್ಲೆಯಲ್ಲಿ ಮೊದಲ ಬಾರಿಗೆ ಜೆಡಿಎಸ್ ಕುಗ್ರಾಮವಾದ ಹುಲಿತಾಳದಿಂದ ಪ್ರಚಾರ ಆರಂಭಿಸಿದೆ. ಮತದಾರರಿಂದ ಜೆಡಿಎಸ್ಗೆ ಜಿಲ್ಲೆಯಲ್ಲಿ ಉತ್ತಮ ಬೆಂಬಲ ಸಿಗುತ್ತಿದೆ ಎಂದರು.
ಕಾರ್ಯಕ್ರಮದಲ್ಲಿ ಯುವ ಜೆಡಿಎಸ್ನ ಮುಖಂಡ ಪರಿಚನ ಗೌತಮ್, ಹೆಚ್.ಎಂ.ಕೌಶಿ, ಮಾಜಿ ಶಾಸಕ ಪಿ.ಡಿ.ಸುಬ್ಬಯ್ಯನವರ ಪುತ್ರ ಪಾಂಡನ ರಾಮಚಂದ್ರ, ಪ್ರವೀಣ್, ವಿನೋದ್, ನಿತಿನ್, ಪುನೀತ್, ದರ್ಶನ್, ಸೂರ್ಯ, ದಯಾ, ಹೆಚ್.ಎಂ. ಮರಿ, ಹಾಗೂ ನಂದಾ ಕುಮಾರ್, ಹಾಜರಿದ್ದರು. ಸಭೆಯಲ್ಲಿ ಬಿಜೆಪಿ, ಕಾಂಗ್ರೆಸ್ ಪಕ್ಷ ತೊರೆದ ಯುವಕರು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಗೊಂಡರು.