ಕೂಡಿಗೆ, ಮಾ. 5 : ಕೋವರ್‍ಕೊಲ್ಲಿ-ಕೂಡಿಗೆ ರಸ್ತೆ ಕಾಮಗಾರಿ ನಡೆಯುತ್ತಿದ್ದು, ಕೂಡಿಗೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಮಲ್ಲೇನಹಳ್ಳಿ ಗ್ರಾಮದಲ್ಲಿ ಮುಖ್ಯ ಪೈಪ್‍ಗೆ ಹಾನಿಯಾಗಿರುವದರಿಂದ ಗ್ರಾಮಸ್ಥರು ನೀರಿಗಾಗಿ ಪರದಾಡುತ್ತಿದ್ದಾರೆ.
ಕಳೆದ ಮೂರು ತಿಂಗಳಿಂದ ರಸ್ತೆ ಕಾಮಗಾರಿ ನಡೆಯುತ್ತಿದ್ದು, ಗ್ರಾಮ ಪಂಚಾಯ್ತಿ ವತಿಯಿಂದ ಪೈಪ್‍ಗಳ ಅಳವಡಿಕೆಗೆ ಯಾವದೇ ರೀತಿಯಲ್ಲು ಸ್ಪಂದಿಸದಿರುವದರಿಂದ ಈ ವ್ಯಾಪ್ತಿಯ ಜನರು ನೀರಿಗಾಗಿ ಪರಿತಪಿಸುವಂತಾಗಿದೆ ಎಂದು ಆರೋಪಿಸಿ ಗ್ರಾಮಸ್ಥರು ಇಂದು ಪ್ರತಿಭಟನೆಗಿಳಿದರು.
ಸ್ಥಳಕ್ಕೆ ಆಗಮಿಸಿದ ಜನಪ್ರತಿನಿಧಿಗಳನ್ನು ಗ್ರಾಮಸ್ಥರು ತರಾಟೆಗೆ ತೆಗೆದುಕೊಂಡರು. ಈ ಸಂದರ್ಭ ಗ್ರಾಮ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ಸ್ವಾಮಿ ನಾಯಕ್ ಅವರು ಹೊಸ ಪೈಪ್‍ಗಳನ್ನು ಅಳವಡಿಸಿ ಕುಡಿಯುವ ನೀರಿನ ವ್ಯವಸ್ಥೆಯನ್ನು ಸರಿಪಡಿಸುವದಾಗಿ ಭರವಸೆ ನೀಡಿದರು.