ಕುಶಾಲನಗರ, ಮಾ. 5: ಹೋಳಿ ಹುಣ್ಣಿಮೆ ಅಂಗವಾಗಿ ಕುಶಾಲನಗರ ಮಾತೆ ಕಾವೇರಿ ಆರತಿ ಬಳಗದ ಆಶ್ರಯದಲ್ಲಿ ಜೀವನದಿ ಕಾವೇರಿಗೆ 77ನೇ ಮಹಾ ಆರತಿ ಬೆಳಗಲಾಯಿತು. ಕುಶಾಲನಗರ ಅಯ್ಯಪ್ಪಸ್ವಾಮಿ ದೇವಾಲಯ ಬಳಿ ಕಾವೇರಿ ನದಿ ತಟದಲ್ಲಿ ನಡೆದ ಪೂಜಾ ಕಾರ್ಯಕ್ರಮದ ಅಂಗವಾಗಿ ಮುಖ್ಯ ಅರ್ಚಕರಾದ ಕೃಷ್ಣಮೂರ್ತಿ ಭಟ್ ಅಷ್ಟೋತ್ತರ, ಅರ್ಚನೆ ನಂತರ ಮಹಾ ಆರತಿ ಬೆಳಗಲಾಯಿತು. ಈ ಸಂದರ್ಭ ಬಳಗದ ಪ್ರಮುಖರಾದ ಎಂ.ಎನ್. ಚಂದ್ರಮೋಹನ್, ಡಿ.ಆರ್. ಸೋಮಶೇಖರ್, ಕೆ.ಆರ್. ಶಿವಾನಂದನ್ ಮತ್ತಿತರರು ಇದ್ದರು. ಕುಶಾಲನಗರ ಕೊಪ್ಪ ಸೇತುವೆ ಬಳಿ ಕಾವೇರಿ ಪ್ರತಿಮೆಗೆ ಅಭಿಷೇಕ ನಂತರ ಆರತಿ ಬೆಳಗುವ ಕಾರ್ಯಕ್ರಮ ನಡೆಯಿತು. ಬಾರವಿ ಕನ್ನಡ ಸಂಘದ ಪ್ರಮುಖರಾದ ಬಬೀಂದ್ರ ಪ್ರಸಾದ್, ರವೀಂದ್ರ ಪ್ರಸಾದ್, ವಿಜೇಂದ್ರ ಪ್ರಸಾದ್ ಮತ್ತಿತರರು ಇದ್ದರು.