ನಾಪೆÉÇೀಕ್ಲು, ಮಾ. 5: ಬಿಜೆಪಿ ಜಿಲ್ಲಾ ವೈದ್ಯಕೀಯ ಪ್ರಕೋಷ್ಠದ ವತಿಯಿಂದ ತಪಾಸಣೆ ನಡೆಸಲಾದ ವಿಕಲಚೇತನರಿಗೆ ಅಂಗವಿಕಲ ಕಾರ್ಡನ್ನು ಶಾಸಕ ಕೆ. ಜಿ. ಬೋಪಯ್ಯ ಸ್ಥಳೀಯ ಪ್ರವಾಸಿ ಮಂದಿರದಲ್ಲಿ ವಿತರಿಸಿದರು.
ಈ ಸಂದರ್ಭ ಮಾತನಾಡಿದ ಅವರು, ವಿಕಲಚೇತನ ಕಾರ್ಡ್‍ನಿಂದ ಫಲಾನುಭವಿಗಳು ಸರಕಾರದ ಸೌಲಭ್ಯವನ್ನು ಪಡೆಯಬಹುದಾಗಿದೆ. ಮುಂದಿನ ದಿನಗಳಲ್ಲಿ ಎಲ್ಲಾ ವಿಕಲಚೇತನರಿಗೆ ಈ ಕಾರ್ಡ್ ವಿತರಿಸಲು ಕ್ರಮ ಕೈಗೊಳ್ಳಲಾಗುವದು ಎಂದರು.
ಬಿ.ಜೆ.ಪಿ. ರಾಜ್ಯ ಕಾರ್ಯದರ್ಶಿ ಅಪ್ಪಚೆಟ್ಟೋಳಂಡ ಮನು ಮುತ್ತಪ್ಪ ಮಾತನಾಡಿ, ಬಿಜೆಪಿ ವೈದ್ಯಕೀಯ ಪ್ರಕೋಷ್ಠದ ವತಿಯಿಂದ ಇತ್ತೀಚೆಗೆ ನಾಪೆÇೀಕ್ಲು ಭಗವತಿ ದೇವಾಲಯದ ಸಮುದಾಯ ಭವನದಲ್ಲಿ ಅಂಗವಿಕಲರಿಗೆ ಉಚಿತ ವೈದ್ಯಕೀಯ ಚಿಕಿತ್ಸಾ ಶಿಬಿರವನ್ನು ಏರ್ಪಡಿಸ ಲಾಗಿತ್ತು. ಈ ಪೈಕಿ ಮೊದಲ ಬಾರಿಗೆ 25 ಜನ ಫಲಾನುಭವಿಗಳಿಗೆ ಗುರುತಿನ ಚೀಟಿ ನೀಡಲಾಗಿದೆ ಎಂದರು. ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಬಿ.ಎ. ಹರೀಶ್, ಸದಸ್ಯ ಪಾಡಿಯಮ್ಮಂಡ ಮುರಳಿ ಕರುಂಬಮ್ಮಯ್ಯ, ಮಡಿಕೇರಿ ತಾಲೂಕು ಪಂಚಾಯಿತಿ ಅಧ್ಯಕ್ಷೆ ತೆಕ್ಕಡೆ ಶೋಭಾ ಮೋಹನ್, ಉಪಾಧ್ಯಕ್ಷ ಬೊಳಿಯಾಡಿರ ಸಂತು ಸುಬ್ರಮಣಿ, ಸದಸ್ಯೆ ಕೋಡಿಯಂಡ ಇಂದಿರಾ ಹರೀಶ್, ಬಿಜೆಪಿ ಮುಖಂಡರಾದ ತಳೂರು ಕಿಶೋರ್‍ಕುಮಾರ್, ಅಂಬಿ ಕಾರ್ಯಪ್ಪ, ಮನು ಮಹೇಶ್, ಕುಮಾರ್ ಸೋಮಣ್ಣ ಮತ್ತಿತರರು ಇದ್ದರು.