ಒಡೆಯನಪುರ, ಮಾ. 5: ಜಿಲ್ಲಾ ಉಸ್ತುವಾರಿ ಸಚಿವ ಎಂ. ಆರ್. ಸೀತಾರಾಮ್ ಅವರು ತಾ. 7 ರಂದು ದುಂಡಳ್ಳಿ ಗ್ರಾ.ಪಂ.ವ್ಯಾಪ್ತಿಯಲ್ಲಿ ವಿವಿಧ ಕಾಮಗಾರಿಗಳನ್ನು ಉದ್ಘಾಟಿಸಲಿದ್ದಾರೆ ಎಂದು ದುಂಡಳ್ಳಿ ಗ್ರಾ.ಪಂ. ಪ್ರಕಟಣೆಯಲ್ಲಿ ತಿಳಿಸಿದೆ. ಅಂದು ಬೆಳಿಗ್ಗೆ 10-30ಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಎಂ.ಆರ್.ಸೀತಾರಾಮ್ ಅವರು ದುಂಡಳ್ಳಿ ಗ್ರಾ.ಪಂ.ವ್ಯಾಪ್ತಿಯ ಎಡೆಹಳ್ಳಿ ಗ್ರಾಮದಲ್ಲಿ 2017-18ನೇ ಸಾಲಿನ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವತಿಯಿಂದ ನೂತನವಾಗಿ ನಿರ್ಮಾಣಗೊಂಡಿರುವ ಅಂಗನವಾಡಿ ಕಟ್ಟಡವನ್ನು ಲೋಕಾರ್ಪಣೆಗೊಳಿಸಲಿದ್ದಾರೆ. ದುಂಡಳ್ಳಿ ಗ್ರಾ.ಪಂ. ಅಧ್ಯಕ್ಷ ಸಿ. ಜೆ. ಗಿರೀಶ್ ಅಧ್ಯಕ್ಷತೆ ವಹಿಸಲಿದ್ದಾರೆ. ಬೆಳಿಗ್ಗೆ 11 ಗಂಟೆಗೆ ಶಾಸಕ ಎಂ.ಪಿ.ಅಪ್ಪಚ್ಚುರಂಜನ್ ದುಂಡಳ್ಳಿ ಗ್ರಾ.ಪಂ.ವತಿಯಿಂದ ಚಿಕ್ಕಕೊಳತ್ತೂರು ಗ್ರಾಮದ ಕಾನ್ವೆಂಟ್ ರಸ್ತೆಯಲ್ಲಿ ನಿರ್ಮಿಸಿರುವ ಕುಡಿಯುವನೀರಿನ ಘಟಕವನ್ನು ಉದ್ಘಾಟಿಸಲಿದ್ದಾರೆ. ಬೆಳಿಗ್ಗೆ 11-30 ಕ್ಕೆ ಎಂಎಲ್‍ಸಿ ವೀಣಾ ಅಚ್ಚಯ್ಯ ಅವರು ಸುಳುಗಳಲೆ ಕಾಲೋನಿಯಲ್ಲಿ ನಿರ್ಮಿಸಿರುವ ಸಮುದಾಯ ಭವನವನ್ನು ಲೋಕಾರ್ಪಣೆಗೊಳಿಸಲಿದ್ದು ಮಧ್ಯಾಹ್ನ 12 ಗಂಟೆಗೆ ಜಿ.ಪಂ. ಅಧ್ಯಕ್ಷ ಹರೀಶ್ ಅವರು ಬಿದರೂರು ಹೊಸಕಾಲೋನಿಯ ನಾಮ ಫಲಕವನ್ನು ಉದ್ಘಾಟಿಸುತ್ತಾರೆ ಇದೇ ಸಂದರ್ಭದಲ್ಲಿ ತಾ.ಪಂ.ಅಧ್ಯಕ್ಷೆ ಪುಷ್ಪಾರಾಜೇಶ್ ಸುಳುಗಳಲೆ ಗ್ರಾಮದ ನಾಮ ಫಲಕವನ್ನು ಉದ್ಘಾಟಿಸಲಿದ್ದಾರೆ.