ಸೋಮವಾರಪೇಟೆ, ಮಾ. 6: ಇಲ್ಲಿನ ವಾಹನ ಚಾಲಕರು ಮತ್ತು ಮೋಟಾರು ಕೆಲಸಗಾರರ ಸಂಘದ ನೂತನ ಸಾಲಿನ ಅಧ್ಯಕ್ಷರಾಗಿ ಸಿ.ಸಿ. ನಂದಕುಮಾರ್ ಪುನರಾಯ್ಕೆಯಾಗಿದ್ದಾರೆ.

ಸ್ಥಳೀಯ ಕೊಡವ ಸಮಾಜದಲ್ಲಿ ನಡೆದ ಸಂಘದ ವಾರ್ಷಿಕ ಮಹಾಸಭೆಯಲ್ಲಿ ಈ ಆಯ್ಕೆ ನಡೆಯಿತು. ಪ್ರಧಾನ ಕಾರ್ಯದರ್ಶಿಗಳಾಗಿ ಬಾಲಕೃಷ್ಣ ಪೂಜಾರಿ, ಉಪಾಧ್ಯಕ್ಷರಾಗಿ ಡಿ.ಜೆ. ಪರಮೇಶ್, ಉಪ ಕಾರ್ಯದರ್ಶಿಯಾಗಿ ಎ.ಕೆ. ಪ್ರಕಾಶ್,ಸಹ ಕಾರ್ಯದರ್ಶಿಯಾಗಿ ಚೆನ್ನಪ್ಪ ಹಾಗೂ ಖಜಾಂಚಿಯಾಗಿ ಕೆ.ಎಸ್. ಖಾದರ್ ಅವರನ್ನು ಆಯ್ಕೆ ಮಾಡಲಾಯಿತು.

ಸಂಘಕ್ಕೆ ಸ್ವಂತ ನಿವೇಶನ ಹೊಂದುವದು ಮತ್ತು ಸಹಕಾರ ಬ್ಯಾಂಕ್ ಸ್ಥಾಪಿಸುವ ಬಗ್ಗೆ ಸಭೆಯಲ್ಲಿ ಸುದೀರ್ಘ ಚರ್ಚೆ ನಡೆಯಿತು. ಇದರೊಂದಿಗೆ ಆಯುಧ ಪೂಜೋತ್ಸವವನ್ನು ಪ್ರತಿ ವರ್ಷದಂತೆ ಅದ್ಧೂರಿ ಮತ್ತು ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಯಿತು.