ಮಡಿಕೇರಿ, ಮಾ. 6: ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಘಟಕದ ವತಿಯಿಂದ ತಾ. 7 ರಂದು (ಇಂದು) ವ್ಯಕ್ತಿತ್ವ ವಿಕಸನ ಕಾರ್ಯಾಗಾರವನ್ನು ಆಯೋಜಿಸಲಾಗಿದೆ ಎಂದು ಸಮಿತಿಯ ಜಿಲ್ಲಾ ಸಂಚಾಲಕ ಹೆಚ್.ಎಲ್. ದಿವಾಕರ್ ತಿಳಿಸಿದ್ದಾರೆ.
ನಗರದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಧ್ಯಾಹ್ನ 2 ಗಂಟೆಗೆ ಕಾಲೇಜಿನ ಪ್ರಾಂಶುಪಾಲೆ ಪ್ರೊ. ಚೈತ್ರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ. ರಾಜೇಂದ್ರ ಪ್ರಸಾದ್ ಉದ್ಘಾಟಿಸಲಿದ್ದಾರೆ.