ಮಡಿಕೇರಿ, ಮಾ. 6: ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಹಾಗೂ ಜಿಲ್ಲಾ ಸ್ತ್ರೀಶಕ್ತಿ ಒಕ್ಕೂಟ ಇವರ ಸಹಯೋಗದಲ್ಲಿ ಅಂತರ್ರಾಷ್ಟ್ರೀಯ ಮಹಿಳಾ ದಿನಾಚರಣೆಯು ತಾ. 8 ರಂದು ಬೆಳಿಗ್ಗೆ 10.30ಕ್ಕೆ ಕಾವೇರಿ ಕಲಾಕ್ಷೇತ್ರದಲ್ಲಿ ನಡೆಯಲಿದೆ. ಅತಿಥಿ ಗಣ್ಯರು ಭಾಗವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಮಹಿಳೆಯರಿಗಾಗಿ ಏರ್ಪಡಿಸಿದ್ದ ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಗುವದೆಂದು ಪ್ರಕಟಣೆ ತಿಳಿಸಿದೆ.