*ಗೋಣಿಕೊಪ್ಪಲು, ಮಾ. 6 : ಕುಂದಾ, ಹಳ್ಳಿಗಟ್ಟು ಗ್ರಾಮದಲ್ಲಿ ನೂತನವಾಗಿ ನಿರ್ಮಾಣವಾದ ಬಸವೇಶ್ವರ ಬಡಾವಣೆಯ ರೂ. 8 ಲಕ್ಷ ವೆಚ್ಚದಲ್ಲಿ ನಿರ್ಮಾಣವಾದ ಸೇತುವೆಯನ್ನು ಶಾಸಕ ಕೆ.ಜಿ. ಬೋಪಯ್ಯ ಲೋಕಾರ್ಪಣೆ ಗೊಳಿಸಿದರು.

ಹಾತೂರು ಗ್ರಾ.ಪಂ. ವ್ಯಾಪ್ತಿಯ ಬಸವೇಶ್ವರ ಬಡಾವಣೆಯಲ್ಲಿ ಅರುವತ್ತೊಕ್ಲು ಗ್ರಾ.ಪಂ ವ್ಯಾಪ್ತಿಯ ಸೀತಾ ಕಾಲೋನಿಯಲ್ಲಿ ತಾತ್ಕಾಲಿತ ಗುಡಿಸಲಿನಲ್ಲಿ ವಾಸಮಾಡುತ್ತಿರುವ ನಿರಾಶ್ರಿತ 116 ಕುಟುಂಬಗಳಿಗೆ ಮನೆಗಳು ನಿರ್ಮಾಣವಾಗುತ್ತಿದೆ. ಬಡಾವಣೆಗೆ ಪ್ರವೇಶಿಸಲು ಸೇತುವೆಯ ಅಗತ್ಯವಿತ್ತು. ಹೀಗಾಗಿ ರೂ. 8 ಲಕ್ಷ ವೆಚ್ಚದಲ್ಲಿ ಸೇತುವೆ ಕಾಮಗಾರಿ ಪೂರ್ಣಗೊಂಡು ಬಡಾವಣೆ ಪ್ರವೇಶಿಸಲು, ಜನ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ. ಸೇತುವೆ ನಿರ್ಮಾಣದಿಂದ ಮನೆ ನಿರ್ಮಾಣಕ್ಕೆ ಬೇಕಾದ ಸಿಮೆಂಟ್, ಇಟ್ಟಿಗೆ ಮತ್ತು ಕಬ್ಬಿಣದಂತಹ ಸಾಮಾಗ್ರಿಗಳನ್ನು ಸಾಗಾಟ ಮಾಡಲು ಅನುಕೂಲವಾಗುತ್ತಿದ್ದು, ಶೀಘ್ರದಲ್ಲೇ ಮನೆ ನಿರ್ಮಾಣ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ಗುತ್ತಿಗೆದಾರ ಪಾರುವಂಗಡ ರಾಜಪ್ಪ ಈ ಸಂದರ್ಭ ತಿಳಿಸಿದರು.

ಜಿಲ್ಲಾ ವರ್ತಕರ ಪ್ರಕೋಷ್ಟ ಅಧ್ಯಕ್ಷ ಕಾಡ್ಯಮಾಡ ಗಿರೀಶ್ ಗಣಪತಿ, ಅರುವತ್ತೊಕ್ಲು ಗ್ರಾ.ಪಂ. ಅಧ್ಯಕ್ಷ ತೀತಮಾಡ ಸುಗಣ ಸೊಮಯ್ಯ, ತಾಲೂಕು ಬಿ.ಜೆ.ಪಿ. ಅಧ್ಯಕ್ಷ ಕುಂಞಂಗಡ ಅರುಣ್ ಭೀಮಯ್ಯ, ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಜಯಣ್ಣ , ಪೆÇನ್ನಂಪೇಟೆ ಬಿ.ಜೆಪಿ. ಸ್ಥಾನೀಯ ಸಮಿತಿ ಅಧ್ಯಕ್ಷ ಮುದ್ದಿಯಡ ಮಂಜು, ಫೆಡರೇಷನ್ ನಿರ್ದೇಶಕ ಮಲ್ಲಂಡ ಮಧು, ಬುಡಕಟ್ಟು ಜನರ ವಸತಿ ನಿರ್ಮಾಣ ಸಮಿತಿ ಸಂಚಾಲಕ ಗಪ್ಪು, ಗುತ್ತಿಗೆದಾರ ರಾಜಪ್ಪ ಹಾಗೂ ಫಲಾನುಭವಿಗಳು ಹಾಜರಿದ್ದರು.