ನಾಪೆÉÇೀಕ್ಲು, ಮಾ. 7: ಜಿಲ್ಲೆಯ ಅಲ್ಪಸಂಖ್ಯಾತರು ಪ್ರಧಾನಿ ನರೇಂದ್ರ ಮೋದಿಯ ಆಡಳಿತವನ್ನು ಒಪ್ಪಿ ಬಿಜೆಪಿ ಪರವಾಗಿದ್ದಾರೆ. ಕಾಂಗ್ರೆಸ್ ಪಕ್ಷ ಇನ್ನು ಮುಂದೆ ಅಲ್ಪಸಂಖ್ಯಾತರನ್ನು ಸುಳ್ಳು ಭರವಸೆಗಳ ಮೂಲಕ ವಂಚಿಸಲು ಸಾಧ್ಯವಿಲ್ಲ ಎಂದು ಜಿಲ್ಲಾ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಅಧ್ಯಕ್ಷ ಎಂ.ಜಿ. ಜಾಹಿರ್ ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಇತ್ತೀಚೆಗೆ ನಡೆದ ಚುನಾವಣೆಗಳಲ್ಲಿ ಬಿಜೆಪಿ ಜಯಭೇರಿ ಭಾರಿಸುವದರ ಮೂಲಕ ಕಾಂಗ್ರೆಸ್ ಮುಕ್ತ ಭಾರತದ ಸಂದೇಶವನ್ನು ನೀಡಿದೆ. ಕರ್ನಾಟಕದಲ್ಲಿಯೂ ಕಾಂಗ್ರೆಸ್ ಹೀನಾಯ ಸೋಲು ಅನುಭವಿಸಲಿದೆ ಎಂದರು. ರಾಜ್ಯದಲ್ಲಿ ಆಡಳಿತ ಸಂಪೂರ್ಣ ಹದಗೆಟ್ಟಿದೆ. ಕಾಂಗ್ರೆಸ್ ಪಕ್ಷ ರಾಜ್ಯದ ಜನರ ವಿಶ್ವಾಸವನ್ನು ಕಳೆದುಕೊಂಡಿದೆ. ಕಾಂಗ್ರೆಸ್ ಪಕ್ಷಕ್ಕೆ ಭ್ರಷ್ಟರನ್ನು ಸೇರ್ಪಡೆಗೊಳಿಸಲಾಗುತ್ತಿದೆ. ಇದು ಕಾಂಗ್ರೆಸ್ ಪಕ್ಷದ ಅವನತಿಯ ಸಂಕೇತವಾಗಿದೆ ಎಂದು ಭವಿಷ್ಯ ನುಡಿದರು.

ಗೋಷ್ಠಿಯಲ್ಲಿ ಎಮ್ಮೆಮಾಡು ಗ್ರಾಮ ಪಂಚಾಯಿತಿ ಅಧ್ಯಕ್ಷ ನೆರೂಟ್ ಅಲಿ ಇದ್ದರು.