ಮಡಿಕೇರಿ, ಮಾ. 7: ಕೊಡಗು ಜಿಲ್ಲಾ ಅಪರ ಜಿಲ್ಲಾಧಿಕಾರಿಯಾಗಿ ಕೆಎಎಸ್ ಹಿರಿಯ ಶ್ರೇಣಿ ವಿಭಾಗದ ಡಿ.ಎಂ. ಸತೀಶ್‍ಕುಮಾರ್ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶಿಸಿದೆ. ಸತೀಶ್ ಅವರು ಈ ಹಿಂದೆ ಚೆಸ್ಕಾಂನ ಆಡಳಿತ ವಿಭಾಗದ ವ್ಯವಸ್ಥಾಪಕ ನಿರ್ದೇಶಕರಾಗಿದ್ದರು. ಅಪರ ಜಿಲ್ಲಾಧಿಕಾರಿಯಾಗಿದ್ದ ಕೆ.ಎಂ. ಸತೀಶ್ ಕುಮಾರ್ ಅವರ ವರ್ಗಾವಣೆಯಾದ ಹಿನ್ನೆಲೆಯಲ್ಲಿ ಅವರ ಸ್ಥಾನಕ್ಕೆ ಸರ್ಕಾರ ಡಿ.ಎಂ. ಸತೀಶ್‍ಕುಮಾರ್ ಅವರನ್ನು ನೇಮಕ ಮಾಡಿದೆ.