ವೀರಾಜಪೇಟೆ, ಮಾ. 7: ವೀರಾಜಪೇಟೆ ತಾಲೂಕು ಸವಿತಾ ಸಮಾಜದ ಕ್ರೀಡಾ ಮತ್ತು ಸಾಂಸ್ಕøತಿಕ ಸಮಿತಿ ವತಿಯಿಂದ ಜನಾಂಗ ಬಾಂಧವರಿಗೆ ಸೀಮಿತಗೊಂಡಂತೆ ಏಪ್ರಿಲ್ 14 ಮತ್ತು 15 ರಂದು ವೀರಾಜಪೇಟೆ ಕಾವೇರಿ ಕಾಲೇಜು ಮೈದಾನದಲ್ಲಿ 2ನೇ ವರ್ಷದ ಕ್ರೀಡಾಕೂಟದ ಪ್ರಯುಕ್ತ ಕ್ರಿಕೆಟ್ ಪಂದ್ಯಾಟ, ಹಗ್ಗಜಗ್ಗಾಟ, ಮಕ್ಕಳಿಗೆ ಸಾಂಸ್ಕ್ರತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ಸಮಾಜದ ಕ್ರೀಡಾ ಮತ್ತು ಸಾಂಸ್ಕøತಿಕ ಸಮಿತಿ ಅಧ್ಯಕ್ಷ ಕೆ.ಟಿ ವೆಂಕಟೇಶ್ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವೆಂಕಟೇಶ್, ಕ್ರಿಕೆಟ್ ಪಂದ್ಯಾಟದಲ್ಲಿ ಭಾಗವಹಿಸುವ ತಂಡದ ಆಟಗಾರರಿಗೆ ಜಾತಿ ಪ್ರಮಾಣ ಪತ್ರ ಹಾಗೂ ಆಧಾರ್ ಕಾರ್ಡ್‍ಗಳನ್ನು ಕಡ್ಡಾಯಗೊಳಿಸಲಾಗಿದೆ. ವಿಜೇತ ತಂಡಗಳಿಗೆ ನಗದು ಹಾಗೂ ಟ್ರೋಫಿ ಹಾಗೂ ವೈಯಕ್ತಿಕ ಬಹುಮಾನಗಳನ್ನು ನೀಡಲಾಗುವದು. ಓಪನ್ ಟೈಸ್ ಮೂಲಕ ಪಂದ್ಯಾಟವನ್ನು ನಡೆಸಲಾಗುವದು. ಮಹಿಳೆಯರಿಗೆ ಹಗ್ಗಜಗ್ಗಾಟ, ಮಕ್ಕಳಿಗೆ ಸಾಂಸ್ಕøತಿಕ ಕಾರ್ಯಕ್ರಮ ಆಯೋಜಿಸಲಾಗಿದೆ ಹೆಚ್ಚಿನ ಮಾಹಿತಿಗಾಗಿ ಮೊ. 9482943789 ಅಥವಾ 9741936164 ಸಂಪರ್ಕಿಸಬಹುದು ಎಂದು ತಿಳಿಸಿದರು.

ಗೋಷ್ಠಿಯಲ್ಲಿ ಉಪಾಧ್ಯಕ್ಷ ಪಿ. ರಾಜಾ, ಪ್ರಧಾನ ಕಾರ್ಯದರ್ಶಿ ಈಶ್ವರ, ಸಹ ಕಾರ್ಯದರ್ಶಿ ಬಿ.ಎಂ ಕಿರಣ್, ಖಜಾಂಚಿ ಸುಭಾಷ್ ಬಿ.ಆರ್. ಅನಿಲ್ ಕುಮಾರ್ ಉಪಸ್ಥಿತರಿದ್ದರು.