ಮರಗೋಡು, ಮಾ. 8: ಮರಗೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚೆರಿಯಮನೆ, ಕಾನಡ್ಕ ಗ್ರಾಮದ ಜನತೆಗೆ ಅನುಕೂಲವಾಗಲು ಕುಡಿಯುವ ನೀರಿನ ಟ್ಯಾಂಕ್ ಅನ್ನು ಪಂಚಾಯಿತಿ ಅಧ್ಯಕ್ಷ ಬಿದ್ರುಪಣೆ ಮೋಹನ್ ಉದ್ಘಾಟಿಸಿದರು.
ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಬಿ.ಆರ್. ಆಶಾ ಕುಮಾರಿ, ಪಂಚಾಯಿತಿ ಸದಸ್ಯ ಮುಂಡೋಡಿ ಎಂ. ನಾಣಯ್ಯ, ಸೇರಿದಂತೆ ಇನ್ನಿತರು ಹಾಜರಿದ್ದರು.