ಕುಶಾಲನಗರ, ಮಾ. 8: ಕುಶಾಲನಗರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಮೇಲೆ ಹಲ್ಲೆಗೆ ಯತ್ನಿಸಿದ ಘಟನೆಗೆ ರಾಜ್ಯ ಸರಕಾರಿ ನೌಕರರ ಸಂಘದ ಪ್ರಮುಖರು ಖಂಡನೆ ವ್ಯಕ್ತಪಡಿಸಿದ್ದಾರೆ.

ಕುಶಾಲನಗರದ ಪ್ರವಾಸಿ ಮಂದಿರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ತಾಲೂಕು ಅಧ್ಯಕ್ಷ ಕೆ.ಎಸ್. ಪ್ರಸನ್ನಕುಮಾರ್, ಜಿಲ್ಲೆಯ ಕೆಲವೆಡೆ ಸರಕಾರಿ ನೌಕರರು ಮುಕ್ತವಾಗಿ ಕಾರ್ಯನಿರ್ವಹಿಸಲು ಪದೇ ಪದೇ ಅಡ್ಡಿಯುಂಟಾಗುತ್ತಿದೆ.

ಲೋಪದೋಷಗಳಿದ್ದಲ್ಲಿ ಕಾನೂನಾತ್ಮಕವಾಗಿ ಕ್ರಮಕ್ಕೆ ಮುಂದಾಗುವದನ್ನು ಬಿಟ್ಟು ಕಾನೂನನ್ನು ಕೈಗೆತ್ತಿಕೊಳ್ಳುವ ಕೃತ್ಯ ಅತ್ಯಂತ ಖಂಡನೀಯ ವಿಚಾರವಾಗಿದೆ ಎಂದರು.

ಸಂಘದ ನಿರ್ದೇಶಕ ಫಿಲಿಪ್‍ವಾಸ್ ಮಾತನಾಡಿ, ಸರಕಾರಿ ನೌಕರರ ಮೇಲಿನ ಹಲ್ಲೆ ಪ್ರಕರಣಗಳು ಈ ಹಿಂದೆಯೂ ಹಲವು ಬಾರಿ ಘಟಿಸಿದೆ.

ಪಂಚಾಯಿತಿ ಅಧಿಕಾರಿಗಳ ಮೇಲಿನ ದೌರ್ಜನ್ಯ ಹೆಚ್ಚುತ್ತಿದ್ದು ನೌಕರರು ಭಯದ ನೆರಳಲ್ಲಿ ಒತ್ತಡದಿಂದ ಕಾರ್ಯ ನಿರ್ವಹಿಸುವಂತಾಗಿದೆ. ನೌಕರರು ಹಾಗೂ ಅಧಿಕಾರಿಗಳೊಂದಿಗೆ ಸಾರ್ವಜನಿಕರು ಕೈಜೋಡಿಸು ವದರೊಂದಿಗೆ ಉತ್ತಮ ಸೇವೆ ನೀಡುವಲ್ಲಿ ಸಹಕರಿಸಬೇಕಿದೆ ಎಂದು ಕೋರಿದರು.

ಗೋಷ್ಠಿಯಲ್ಲಿ ತಾಲೂಕು ಪ್ರಾಥಮಿಕ ಶಿಕ್ಷಕರ ಸಂಘದ ಅಧ್ಯಕ್ಷ ಹೆಚ್.ಎನ್. ಮಂಜುನಾಥ್, ಸಂಘದ ನಿರ್ದೇಶಕ ಎಂ.ಸಿ. ಮಂಜುನಾಥ್ ಇದ್ದರು.