ನಾಪೋಕ್ಲು, ಮಾ. 8: ಇಲ್ಲಿಗೆ ಸಮೀಪದ ಕಕ್ಕಬೆಯ ಪಾಡಿ ಶ್ರೀ ಇಗ್ಗುತ್ತಪ್ಪ ದೇಗುಲದ ಆವರಣದಲ್ಲಿ ನಿರ್ಮಿಸಲಾಗುತ್ತಿರುವ ಹೈಟೆಕ್ ಅಡುಗೆ ಮನೆ ಕಟ್ಟಡ ಕಾಮಗಾರಿಗೆ ಕಿಡಿಗೇಡಿಗಳು ಹಾನಿಪಡಿಸಿದ್ದು, ಈ ಸಂಬಂಧ ಪೊಲೀಸರಿಗೆ ದೂರು ಸಲ್ಲಿಸಲಾಗಿದೆ.ದೇಗುಲದ ಆವರಣದಲ್ಲಿ ರೂ. 50ಲಕ್ಷ ವೆಚ್ಚದಲ್ಲಿ ಹೈಟೆಕ್ ಅಡುಗೆಮನೆ ನಿರ್ಮಾಣವಾಗುತ್ತಿದ್ದು, ನಿನ್ನೆ ರಾತ್ರಿ ಕಟ್ಟಡದ ಪಿಲ್ಲರ್‍ಗಳಿಗೆ ಕಿಡಿಗೇಡಿಗಳು ಹಾನಿ ಮಾಡಿದ್ದಾರೆ. ಈ ಸಂಬಂಧ ಆಡಳಿತ ಮಂಡಳಿಯವರು ನಾಪೋಕ್ಲು ಪೊಲೀಸರಿಗೆ ದೂರು ಸಲ್ಲಿಸಿದ್ದು, ಸೂಕ್ತ ಕ್ರಮಕ್ಕೆ ಆಗ್ರಹಿಸಿದ್ದಾರೆ.
- ದುಗ್ಗಳ