ಮಡಿಕೇರಿ, ಮಾ. 8: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಕರ್ನಾಟಕ ಗಾಂಧಿ ಸ್ಮಾರಕ ನಿಧಿ ಇವರ ಸಹಕಾರದಲ್ಲಿ ನಗರದ ಕಾವೇರಿ ಕಲಾ ಕ್ಷೇತ್ರದಲ್ಲಿ ಮಹಾತ್ಮ ಗಾಂಧೀಜಿಯವರ 150ನೇ ಜನ್ಮ ವರ್ಷಾಚರಣೆ ಪ್ರಯುಕ್ತ ಗಾಂಧೀಜಿಯವರ ಬದುಕು-ಸಾಧನೆ ಬಿಂಬಿಸುವ ಧ್ವನಿ ಬೆಳಕು ಕಾರ್ಯಕ್ರಮ ನಡೆಯಿತು.
ಗಾಂಧೀಜಿಯವರ ಹುಟ್ಟು, ಬೆಳವಣಿಗೆ, ವಿದ್ಯಾಭ್ಯಾಸ, ದಕ್ಷಿಣ ಆಫ್ರಿಕಾದಲ್ಲಿನ ವರ್ಣಬೇಧ ನೀತಿ, ದಕ್ಷಿಣ ಆಫ್ರಿಕಾದಿಂದ ಭಾರತಕ್ಕೆ ವಾಪಸಾದ ಸಂದರ್ಭದಲ್ಲಿ ದೇಶದಲ್ಲಿನ ಪರಿಸ್ಥಿತಿ, ಕ್ವಿಟ್ ಇಂಡಿಯಾ ಚಳವಳಿ, ಸ್ವಾತಂತ್ರ್ಯಕ್ಕಾಗಿ ಅಹಿಂಸಾ ಹೋರಾಟ, ಹಲವು ಸಂದರ್ಭಗಳಲ್ಲಿ ಉಪವಾಸ ಸತ್ಯಾಗ್ರಹ... ಹೀಗೆ ಮಹಾತ್ಮ ಗಾಂಧೀಜಿಯವರ ಬದುಕು-ಸಾಧನೆಗಳನ್ನು ಒಳಗೊಂಡ ಧ್ವನಿ-ಬೆಳಕು ಕಾರ್ಯಕ್ರಮ ಮನಸೆಳೆಯಿತು.
ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ನಗರಸಭೆ ಅಧ್ಯಕ್ಷೆ ಕಾವೇರಮ್ಮ ಸೋಮಣ್ಣ, ಹುಟ್ಟಿನಿಂದಲೇ ಹೋರಾಟದ ಚಿಂತನೆಗಳನ್ನು ಮೈಗೂಡಿಸಿಕೊಂಡು ಭಾರತಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಮಹಾತ್ಮ ಎಂದು ಗಾಂಧೀಜಿ ಯವರನ್ನು ಬಣ್ಣಿಸಿದರು.
ಸತ್ಯ ಮತ್ತು ಅಹಿಂಸೆ ಮೂಲಕ ದೇಶಕ್ಕೆ ಸ್ವಾತಂತ್ರ್ಯ ತರುವಲ್ಲಿ ಶ್ರಮಿಸಿದ ಮಹಾನ್ ಸಮಾಜ ಸುಧಾರಕ ಗಾಂಧೀಜಿಯವರ ತತ್ವಗಳು ಎಲ್ಲೆಡೆ ಪಸರಿಸಬೇಕು. ವಿಶೇಷವಾಗಿ ವಿದ್ಯಾರ್ಥಿಗಳು ಗಾಂಧೀಜಿಯವರ ತತ್ವ ಸಿದ್ಧಾಂತಗಳ ಬಗ್ಗೆ ತಿಳಿದುಕೊಳ್ಳು ವಂತಾಗಬೇಕು ಎಂದರು.
ಸರ್ವೋದಯ ಸಮಿತಿ ಸದಸ್ಯ ಕೆ.ಟಿ. ಬೇಬಿ ಮ್ಯಾಥ್ಯೂ ಮಾತನಾಡಿ, ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಆದರ್ಶ, ಅಹಿಂಸಾ ಮಾರ್ಗ ಮತ್ತು ದೂರದೃಷ್ಟಿಯನ್ನು ಪ್ರತಿಯೊಬ್ಬರೂ ಅಳವಡಿಸಿಕೊಳ್ಳುವಂತಾಗಬೇಕು, ಗಾಂಧೀಜಿಯವರ ವಿಚಾರದಾರೆಗಳ ಬಗ್ಗೆ ಪ್ರತಿಯೊಬ್ಬರೂ ತಿಳಿದುಕೊಳ್ಳು ವಂತಾಗಬೇಕು ಎಂದರು.
ಪತ್ರಕರ್ತ ಆನಂದ್ ಕೊಡಗು ಮಾತನಾಡಿ ಮಹಾತ್ಮ ಗಾಂಧೀಜಿ ಬಿಟ್ಟು ಭಾರತ ಇಲ್ಲ, ಜೀವನದುದ್ದಕ್ಕೂ ಅಹಿಂಸಾ ಮಾರ್ಗವನ್ನು ಅನುಸರಿಸಿ ದವರು. ಗುಜರಾತ್ನಲ್ಲಿ ಹುಟ್ಟಿ, ಇಡೀ ರಾಷ್ಟ್ರವೇ ಮೆಚ್ಚುವಂತಹ ಕೆಲಸ ಮಾಡಿದವರು ಎಂದು ಹೇಳಿದರು.
ಸರ್ವೋದಯ ಸಮಿತಿ ಸದಸ್ಯರಾದ ವಾಸು, ಅಂಬೆಕಲ್ ಕುಶಾಲಪ್ಪ, ಅಂಬೆಕಲ್ ನವೀನ್, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಗೋಪಾಲ ಕೃಷ್ಣ, ಜಿ.ಪಂ. ಕಾರ್ಯಪಾಲಕ ಇಂಜಿನಿಯರ್ ರಾಜ್ಕುಮಾರ್ ರೆಡ್ಡಿ, ಮೀನುಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ದರ್ಶನ್, ಕಾರ್ಮಿಕ ಇಲಾಖೆ ತಾಲೂಕು ಅಧಿಕಾರಿ ಯತ್ನಟ್ಟಿ, ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕ ಚಿನ್ನಸ್ವಾಮಿ ಸ್ವಾಗತಿಸಿದರು. ಸೌಮ್ಯ ನಿರೂಪಿಸಿದರು, ಅಭಿಷೇಕ್ ಮತ್ತು ಶ್ರೀನಿವಾಸ ವಂದಿಸಿದರು.