ಮಡಿಕೇರಿ, ಮಾ. 9: ಕೊಡಗು ಜಿಲ್ಲಾ ನೂತನ ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ ಡಿ.ಎಂ.ಸತೀಶ್ ಕುಮಾರ್ ಅವರು ಅಧಿಕಾರ ವಹಿಸಿಕೊಂಡಿದ್ದಾರೆ.
ಸತೀಶ್ ಕುಮಾರ್ ಅವರು ಹಾವೇರಿಯಲ್ಲಿ ಪ್ರೊಬೆಷನರಿಯಾಗಿ, ನಂತರ ಬಾಗಲಕೋಟೆಯ ಕೃಷ್ಣ ಮೇಲ್ದಂಡೆ ಯೋಜನೆಯಲ್ಲಿ ಕರ್ತವ್ಯ ನಿರ್ವಹಿಸಿದ್ದಾರೆ, ಬಳಿಕ ಪುತ್ತೂರು ಮತ್ತು ಸಾಗರದಲ್ಲಿ ಉಪ ವಿಭಾಗಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದ್ದಾರೆ. ಬಳಿಕ ಮೈಸೂರಿನ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದಲ್ಲಿ ಪ್ರಧಾನ ವ್ಯವಸ್ಥಾಪಕರಾಗಿ ಸೇವೆ ಸಲ್ಲಿಸಿದ್ದಾರೆ.