ಕೂಡಿಗೆ, ಮಾ. 9 : ಕೂಡಿಗೆಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ತಾ. 16 ರಂದು ಸ್ವಯಂ ಪ್ರೇರಿತ ರಕ್ತದಾನ ಶಿಬಿರ ನಡೆಯಲಿದೆ. ಶಿಬಿರದ ಪೂರ್ವ ಸಿದ್ದತೆಗಾಗಿ ಕೂಡಿಗೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲಕ್ಷೀ ಅಧ್ಯಕ್ಷತೆಯಲ್ಲಿ ನಡೆದ ಕೂಡಿಗೆಯ ಆರೋಗ್ಯ ರಕ್ಷಾ ಸಮಿತಿಯ ಸಭೆಯ ನಿರ್ಣಯದಂತೆ ಸ್ಥಳೀಯ ಸಂಘ ಸಂಸ್ಥೆಗಳ ಸಹಕಾರ ಮತ್ತು ಸಹಯೋಗದೊಂದಿಗೆ ಪ್ವಯಂಪ್ರೇರಿತ ರಕ್ತದಾನ ಶಿಬಿರ ನಡೆಸಲಾಗುವದು ಎಂದು ಪ್ರಾಥಮಿಕ ಆರೋಗ್ಯ ಕೇಂದ್ರ ವೈದ್ಯಾಧಿಕಾರಿ ಡಾ. ರವಿಚಂದ್ರ ತಿಳಿಸಿದ್ದಾರೆ.