ಕುಶಾಲನಗರ, ಮಾ. 9: ಕುಶಾಲನಗರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಮೇಲೆ ಕಲ್ಲು ಎತ್ತಿ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತಕ್ಷಣ ದೂರು ದಾಖಲಿಸಿ ಆರೋಪಿಯ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕೆಂದು ಸೋಮವಾರ ಪೇಟೆ ತಾಲೂಕು ಯುವ ಮೋರ್ಚಾ ಕಾರ್ಯಾಧ್ಯಕ್ಷ ಎಂ.ಡಿ. ಕೃಷ್ಣಪ್ಪ ಆಗ್ರಹಿಸಿದ್ದಾರೆ.

ಇತ್ತೀಚೆಗೆ ಅಕ್ರಮವಾಗಿ ರಸ್ತೆ ಮೇಲೆ ಆವರಣ ಗೋಡೆ ಕಟ್ಟಿದ ಪ್ರಕರಣದ ಹಿನ್ನೆಲೆ ಕುಶಾಲನಗರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಎ.ಎಂ. ಶ್ರೀಧರ್ ಮತ್ತು ಸಿಬ್ಬಂದಿಗಳು ತೆರವು ಕಾರ್ಯಾಚರಣೆ ಮಾಡುವ ಸಂದರ್ಭ ಸಂಬಂಧಿಸಿದ ಲಾಡ್ಜ್ ಮಾಲೀಕ ಮಹಮ್ಮದ್ ಎಂಬವರು ಇಂತಹ ಅಮಾನವೀಯ ಕೃತ್ಯಕ್ಕೆ ಮುಂದಾಗಿರುವದು ಆತಂಕಕಾರಿ ಬೆಳವಣಿಗೆಯಾಗಿದೆ. ಲಾಡ್ಜ್‍ಗೆ ನೀಡಿರುವ ಅನುಮತಿ ಪತ್ರ ಪರವಾನಗಿಯನ್ನು ರದ್ದುಗೊಳಿಸಿ ಕ್ರಮ ಕೈಗೊಳ್ಳಬೇಕು. ಕೂಡಲೇ ಪಂಚಾಯಿತಿ ಅಧಿಕಾರಿಗಳು ಕಾನೂನು ಕ್ರಮಕ್ಕೆ ಮುಂದಾಗಬೇಕು ಎಂದು ಅವರು ಒತ್ತಾಯಿಸಿದ್ದಾರೆ.