ವೀರಾಜಪೇಟೆ, ಮಾ. 9: ಬೆಂಗಳೂರಿನ ಕಂಠೀರವ ಸ್ಟೇಡಿಯಂ ನಲ್ಲಿ ನಡೆದ 39ನೇ ರಾಷ್ಟ್ರೀಯ ಮಾಸ್ಟರ್ಸ್ ಅಥ್ಲೇಟಿಕ್ ಚಾಂಪಿಯನ್ ಶಿಪ್‍ನಲ್ಲಿ ನಾಂಗಾಲ ಗ್ರಾಮದ ಅಂಗನವಾಡಿ ಕಾರ್ಯಕರ್ತೆ ಎನ್.ಕೆ. ಸೀತಮ್ಮ ಪ್ರೇಮಾ ಇವರು ಭಾರದ ಗುಂಡು ಹಾಗೂ ತಟ್ಟೆ ಎಸೆತದಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ. ಮುಂದಿನ ಸೆಪ್ಟಂಬರ್‍ನಲ್ಲಿ ಸ್ಪೇನ್‍ನಲ್ಲಿ ನಡೆಯುವ ಕ್ರೀಡಾಕೂಟಕ್ಕೆ ಅಂತರ್‍ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಅಲ್ಲದೆ 54 ವರ್ಷ ಮೇಲ್ಪಟ್ಟ ಸೌಂದರ್ಯ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ. ಇವರನ್ನು ಶಿವಮೊಗ್ಗದ ಡಿವಿಎಸ್ ಕಾಲೇಜಿನಲ್ಲಿ ದ್ಯೆಹಿಕ ಶಿಕ್ಷಣ ಶಿಕ್ಷಕರ ಇಲಾಖೆಯ ವತಿಯಿಂದ ಸನ್ಮಾನಿಸಲಾಯಿತು.