ಕೂಡಿಗೆ, ಮಾ. 10: ಕೂಡಿಗೆಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ತಾ. 16 ರಂದು ಸ್ವಯಂ ಪ್ರೇರಿತ ರಕ್ತದಾನ ಶಿಬಿರ ನಡೆಯಲಿದೆ. ಶಿಬಿರದ ಪೂರ್ವ ಸಿದ್ಧತೆಗಾಗಿ ಕೂಡಿಗೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲಕ್ಷ್ಮೀ ಅಧ್ಯಕ್ಷತೆಯಲ್ಲಿ ನಡೆದ ಕೂಡಿಗೆಯ ಆರೋಗ್ಯ ರಕ್ಷಾ ಸಮಿತಿಯ ಸಭೆಯ ನಿರ್ಣಯದಂತೆ ಸ್ಥಳೀಯ ಸಂಘ-ಸಂಸ್ಥೆಗಳ ಸಹಕಾರ ಮತ್ತು ಸಹಯೋಗದೊಂದಿಗೆ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ನಡೆಸಲಾಗುವದು ಎಂದು ಪ್ರಾಥಮಿಕ ಆರೋಗ್ಯ ಕೇಂದ್ರ ವೈದ್ಯಾಧಿಕಾರಿ ಡಾ. ರವಿಚಂದ್ರ ತಿಳಿಸಿದ್ದಾರೆ.