ಕೂಡಿಗೆ, ಮಾ. 14: ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬ್ಯಾಡಗೊಟ್ಟ ದಿಡ್ಡಳ್ಳಿ ನಿರಾಶ್ರಿತ ಪುನರ್ವಸತಿ ಕೇಂದ್ರದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಮತದಾನ ಜಾಗೃತಿ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮವನ್ನು ಡಾ. ಚೇತನ್ ಉದ್ಘಾಟಿಸಿದರು. ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ರಮೇಶ್ ಮಾತನಾಡಿ, ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿ ಹಿಡಿಯಲು ತಮಗೆ ದೊರೆತ ಸಂವಿಧಾನ ಬದ್ಧ ಮತದಾನದ ಹಕ್ಕನ್ನು ಸಮರ್ಥವಾಗಿ ಬಳಸಿಕೊಂಡು, ಚುನಾವಣೆಗಳು ಬಂದಾಗ ಯಾವದೇ ಆಮಿಷಗಳಿಗೆ ಒಳಗಾಗದೆ ಮತದಾನ ಮಾಡಿ ತಮ್ಮ ಜವಬ್ದಾರಿಯನ್ನು ರುಜುವಾತು ಪಡಿಸಬೇಕು ಎಂದರು.
ಕಾರ್ಯಕ್ರಮದಲ್ಲಿ ಡಾ. ಭರತ್, ಡಾ. ವೇಲಪ್ಪ ಮತ್ತು ಆರೋಗ್ಯ ಇಲಾಖೆಯ ನಾಗೇಂದ್ರಾಚಾರ್, ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಹೆಚ್.ಕೆ. ಶಾಂತಿ, ಪುಟ್ಟಸ್ವಾಮಿ, ಶಾಲಿನಿ, ಹಾಡಿಯ ಮುಖಂಡರಾದ ಮುತ್ತಣ್ಣ, ಭರತ್ ಇದ್ದರು.