ಮಡಿಕೇರಿ, ಮಾ. 14: ಇಲ್ಲಿನ ಉಪವಿಭಾಗಾಧಿಕಾರಿ ನಂಜುಂಡೇಗೌಡ ಅವರನ್ನು ರಾಜ್ಯ ಸರಕಾರದ ಉಪ ಕಾರ್ಯದರ್ಶಿ ಕಚೇರಿಯ ಶಿಷ್ಟಾಚಾರ ವಿಭಾಗ ಕುಮಾರ ಕೃಪಾ ಅತಿಥಿ ಗೃಹಕ್ಕೆ ವರ್ಗಾವಣೆಗೊಳಿಸಲಾಗಿದೆ. ತೆರವಾದ ಸ್ಥಾನಕ್ಕೆ ರಾಜ್ಯ ಆಹಾರ ಸಚಿವರ ವಿಶೇಷ ಕರ್ತವ್ಯ ಅಧಿಕಾರಿಯಾಗಿದ್ದ ರವಿಚಂದ್ರ ನಾಯಕ್ ಅವರನ್ನು ನೇಮಿಸಲಾಗಿದೆ.ಮಡಿಕೇರಿ ತಹಶೀಲ್ದಾರ್ ಕುಸುಮ ಅವರನ್ನು ಆಲೂರು ತಾಲೂಕು ತಹಶೀಲ್ದಾರ್ ಆಗಿ ವರ್ಗಾಯಿಸಲಾಗಿದೆ. ಅಲ್ಲಿ ಕಾರ್ಯನಿರ್ವಹಿಸುತ್ತಿದ್ದ ಶಾರದಾಂಭ ಅವರನ್ನು ಮಡಿಕೇರಿಗೆ ನಿಯೋಜಿಸಲಾಗಿದೆ. ಸೋಮವಾರಪೇಟೆ ತಹಶೀಲ್ದಾರ್ ಮಹೇಶ್ ಅವರನ್ನು ಹುಣಸೂರಿಗೆ ವರ್ಗಾಯಿಸಲಾಗಿದೆ. ತೆರವಾದ ಸ್ಥಾನಕ್ಕೆ ಭಟ್ಕಳದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಬಾಡೆಕರ್ ಎಂಬವರನ್ನು ನೇಮಿಸಿದ್ದು, ಮೈಸೂರು ಮೂಡಾದಲ್ಲಿ ಕೆಲಸ ನಿರ್ವಹಿಸುತ್ತಿದ್ದ ರಮಾದೇವಿ ಎಂಬವರನ್ನು ಇಲ್ಲಿನ ಚುನಾವಣಾ ತಹಶೀಲ್ದಾರ್ ಆಗಿ ನೇಮಕ ಮಾಡಲಾಗಿದೆ.