ಮಡಿಕೇರಿ, ಮಾ. 14: ಕುಶಾಲನಗರ ಪಟ್ಟಣ ಪಂಚಾಯಿತಿ ವ್ಯಾಪ್ತಿಯ 1ನೇ ಬ್ಲಾಕ್, ಗುಂಡೂರಾವ್ ಬಡಾವಣೆಯಲ್ಲಿ ಐಡಿಎಸ್‍ಎಂಟಿ ಯೋಜನೆಯಡಿ ಅಭಿವೃದ್ಧಿ ಪಡಿಸಲಾಗುತ್ತಿರುವ ನಿವೇಶನಗಳನ್ನು ಆರ್ಥಿಕವಾಗಿ ದುರ್ಬಲರಾದವರಿಗೆ ಹಾಗೂ ಹಿಂದುಳಿದ ವರ್ಗದವರಿಗೆ ಹಂಚಿಕೆ ಮಾಡಲು ಸಾರ್ವಜನಿಕರಿಂದ ಅರ್ಜಿಗಳನ್ನು ಆನ್‍ಲೈನ್ ಮುಖಾಂತರ ಆಹ್ವಾನಿಸಲಾಗಿತ್ತು.

ಅರ್ಜಿ ಸಲ್ಲಿಸಲು ಫೆಬ್ರವರಿ 25 ರಂದು ಅಂತ್ಯಗೊಂಡಿರುತ್ತದೆ. ನಿವೇಶನ ಕೋರಿ ಬಂದಿರುವ ಅರ್ಜಿಗಳನ್ನು ಪರಿಶೀಲಿಸಲಾಗಿದ್ದು. ಅರ್ಹ ಫಲಾನುಭವಿಗಳ ಪಟ್ಟಿ ಹಾಗೂ ಸೂಕ್ತ ದಾಖಲೆಗಳನ್ನು ಲಗತ್ತಿಸದ ಹಾಗೂ ಅನರ್ಹ ಫಲಾನುಭವಿಗಳ ಪಟ್ಟಿಯನ್ನು ತಯಾರಿಸಲಾಗಿರುತ್ತದೆ. ಈ ಬಗ್ಗೆ ಸಾರ್ವಜನಿಕರಿಂದ ಏನಾದರೂ ಆಕ್ಷೇಪಣೆಗಳಿದ್ದಲ್ಲಿ ಕಚೇರಿಗೆ ಬಂದು ಪರಿಶೀಲಸಿ ತಮ್ಮ ಆಕ್ಷೇಪಣೆಗಳನ್ನು 7 ದಿನಗಳ ಒಳಗಾಗಿ ಸಲ್ಲಿಸುವದು. ನಂತರ ಬಂದ ಆಕ್ಷೇಪಣೆ ಗಳನ್ನು ಪರಿಗಣಿಸಲಾಗುವದಿಲ್ಲ ಎಂದು ಜಿಲ್ಲಾದಿಕಾರಿ ಹಾಗೂ ಐಡಿಎಸ್‍ಎಂಟಿ ಸಮಿತಿಯ ಅಧ್ಯಕ್ಷೆ ಪಿ.ಐ. ಶ್ರೀವಿದ್ಯಾ ತಿಳಿಸಿದ್ದಾರೆ.