ಮಡಿಕೇರಿ, ಮಾ. 14: ಆಸ್ಟ್ರೇಲಿಯಾದ ಗೋಲ್ಡ್ ಕೋಸ್ಟ್‍ನಲ್ಲಿ ಮುಂದಿನ ತಿಂಗಳು ನಡೆಯಲಿರುವ ಕಾಮನ್ ವೆಲ್ತ್ ಕ್ರೀಡಾಕೂಟದಲ್ಲಿ ಪಾಲ್ಗೊಳ್ಳುವ ಭಾರತ ಹಾಕಿ ತಂಡದಲ್ಲಿ ಕೊಡಗಿನ ಎಸ್.ವಿ. ಸುನಿಲ್ ಸ್ಥಾನ ಗಳಿಸಿದ್ದಾರೆ. ಈ ಬಾರಿ ಕರ್ನಾಟಕದಿಂದ ಭಾರತ ತಂಡವನ್ನು ಪ್ರತಿನಿಧಿಸಲಿರುವ ಏಕೈಕ ಆಟಗಾರನಾಗಿರುವ ಸುನಿಲ್ ಇತ್ತೀಚೆಗೆ ತಾನೆ ಗೃಹಸ್ಥಾಶ್ರಮಕ್ಕೆ ಕಾಲಿರಿಸಿದ್ದಾರೆ. ಏಪ್ರಿಲ್ 7 ರಂದು ಭಾರತ ಹಾಕಿ ತಂಡ ಪಾಕಿಸ್ತಾನದ ವಿರುದ್ಧ ಸೆಣಸಲಿದೆ.