ಕೂಡಿಗೆ, ಮಾ. 14: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೂಡಿಗೆ ವಲಯದ ಚಿಕ್ಕತ್ತೂರು ಕಾರ್ಯಕ್ಷೇತ್ರದ ಪ್ರಗತಿಬಂಧು ಮತ್ತು ಸ್ವಸಹಾಯ ಸಂಘಗಳ ಸದಸ್ಯರಿಗೆ ಬ್ಯಾಂಕಿಂಗ್ ವ್ಯವಹಾರಗಳನ್ನು ನಡೆಸುವ ವಿಧಾನಗಳ ಬಗ್ಗೆ ತಾಂತ್ರಿಕ ತರಬೇತಿ ಕಾರ್ಯಕ್ರಮ ನಡೆಯಿತು. ಕಮಲಾಕ್ಷೀ ತರಬೇತಿ ನೀಡಿದರು

ಈ ಸಂದರ್ಭ ಸೇವಾಪ್ರತಿನಿಧಿ ಹೇಮಲತಾ ಒಕ್ಕೂಟದ ಅಧ್ಯಕ್ಷರು, ಪದಾಧಿಕಾರಿಗಳು, ಪ್ರಗತಿಬಂಧು ಸ್ವಸಹಾಯ ಸದಸ್ಯರು ಉಪಸ್ಥಿತರಿದ್ದರು.