ಮಡಿಕೇರಿ, ಮಾ. 14: ಜವಾಹರ ನವೋದಯ ವಿದ್ಯಾಲಯ ಗಾಳಿಬೀಡು ವಿದ್ಯಾಲಯದಲ್ಲಿ ಒಂಭತ್ತನೇ ತರಗತಿಯಲ್ಲಿ ಏಳು ಸೀಟುಗಳು ಖಾಲಿಯಿದ್ದು ಅವುಗಳನ್ನು 2018-19ನೇ ಸಾಲಿನ ಶೈಕ್ಷಣಿಕ ಸಾಲಿಗೆ ಸಾಮಾನ್ಯ ಪ್ರವೇಶ ಪರೀಕ್ಷೆಯ ಮೂಲಕ ಭರ್ತಿ ಮಾಡಲಾಗುವುದು. ಕೊಡಗು ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸರ್ಕಾರಿ, ಅನುದಾನಿತ ಪ್ರೌಢಶಾಲೆಗಳಲ್ಲಿ 2017-18ನೇ ಸಾಲಿನಲ್ಲಿ ಎಂಟನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಪ್ರವೇಶ ಬಯಸುವ ವಿದ್ಯಾರ್ಥಿಗಳು ನವೋದಯ ವಿದ್ಯಾಲಯ ಸಮಿತಿ ವೆಬ್‍ಸೈಟ್ ತಿತಿತಿ.ಟಿvshq. oಡಿgಯಲ್ಲಿ ನೇರವಾಗಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಏಪ್ರಿಲ್ 5 ಕಡೆಯ ದಿನವಾಗಿದ್ದು, ಪರೀಕ್ಷೆಯು ಮೇ 19 ರಂದು ಜವಾಹರ ನವೋದಯ ವಿದ್ಯಾಲಯ ಗಾಳಿಬೀಡು ಶಾಲೆಯಲ್ಲಿ ನಡೆಯಲಿದೆ. ಇದರ ಸದುಪಯೋಗ ಪಡಿಸಿಕೊಳ್ಳುವಂತೆ ಪ್ರಾಂಶುಪಾಲರು ಕೋರಿದ್ದಾರೆ.