ಸೋಮವಾರಪೇಟೆ, ಮಾ. 15: ಮಹಿಳಾ ಸಹಕಾರ ಸಂಘದ ವತಿಯಿಂದ ತಾ. 24 ರಂದು ಬೆಳಿಗ್ಗೆ 10 ಗಂಟೆಗೆ ಸಂಘದ ಅಧ್ಯಕ್ಷೆ ನಳಿನಿ ಗಣೇಶ್ ಅಧ್ಯಕ್ಷತೆಯಲ್ಲಿ ಮಹಿಳಾ ದಿನಾಚರಣೆ ಕಾರ್ಯಕ್ರಮ ನಡೆಯಲಿದೆ ಎಂದು ಸಂಘದ ಕಾರ್ಯದರ್ಶಿ ಗಾಯತ್ರಿ ನಾಗರಾಜ್ ತಿಳಿಸಿದ್ದಾರೆ. ಮಹಿಳಾ ಸಮಾಜದಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿವೃತ್ತ ಪರಿವೀಕ್ಷಕಿ ಶಾರದ ರಾಮನ್ ಭಾಗವಹಿಸಲಿದ್ದಾರೆ. ದಿನಾಚರಣೆಯ ಪ್ರಯುಕ್ತ ಸಮಾಜದ ಸದಸ್ಯರಿಗೆ ತಾ. 23 ರಂದು ಮಧ್ಯಾಹ್ನ 2.30ಕ್ಕೆ ವಿವಿಧ ಕ್ರೀಡಾ ಸ್ಪರ್ಧೆಗಳು ಹಾಗೂ ಸಾಂಸ್ಕøತಿಕ ಸ್ಪರ್ಧಾ ಕಾರ್ಯಕ್ರಮ ನಡೆಯಲಿವೆ. ಹೆಚ್ಚಿನ ಮಾಹಿತಿಗಾಗಿ ಮೊ: 9449933319 ಸಂಪರ್ಕಿಸಬಹುದಾಗಿದೆ.