*ಗೋಣಿಕೊಪ್ಪಲು, ಮಾ. 15: ಭಾರತೀಯ ಜನತಾ ಪಾರ್ಟಿಯ ವೀರಾಜಪೇಟೆ ಮಂಡಳ ನವಶಕ್ತಿ ಸಮಾವೇಶ ತಾ. 17 ರಂದು ಗೋಣಿಕೊಪ್ಪಲು ಪರಿಮಳ ಮಂಗಲ ವಿಹಾರದಲ್ಲಿ ಬೆಳಿಗ್ಗೆ 10.30 ಗಂಟೆಗೆ ನಡೆಯಲಿದೆ. ಸಮಾವೇಶಕ್ಕೆ ಕೇಂದ್ರ ಸಚಿವರು, ಮಾಜಿ ಮುಖ್ಯಮಂತ್ರಿಗಳೂ ಆದ ಸದಾನಂದಗೌಡ ಮತ್ತು ಸಚಿವ ಮನ್ಸೂಖ್ ಎಲ್. ಮಾಂಡವ್ಸ, ಜಿಲ್ಲೆಯ ಶಾಸಕರಾದ ಕೆ.ಜಿ. ಬೋಪಯ್ಯ, ಅಪ್ಪಚ್ಚು ರಂಜನ್, ವಿಧಾನ ಪರಿಷತ್ ಸದಸ್ಯ ಸುನಿಲ್ ಸುಬ್ರಮಣಿ, ಪಕ್ಷದ ಅಧ್ಯಕ್ಷರುಗಳು, ಪದಾಧಿಕಾರಿಗಳು, ಚುನಾಯಿತ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ ಎಂದು ವೀರಾಜಪೇಟೆ ಕ್ಷೇತ್ರ ಬಿ.ಜೆ.ಪಿ. ಅಧ್ಯಕ್ಷದ ಕುಂಞಂಗಡ ಅರುಣ್ ಭೀಮಯ್ಯ ತಿಳಿಸಿದ್ದಾರೆ.