ಮಡಿಕೇರಿ, ಮಾ. 15: ಸಂಪಾಜೆ ಹೋಬಳಿ ವ್ಯಾಪ್ತಿಯ ಪೆರಾಜೆ, ಚೆಂಬು ಪಂಚಾಯಿತಿಯ ಜೆಡಿಎಸ್ ಕಾರ್ಯ ಕರ್ತರ ಸಭೆ ಇಂದು ಸಂಪಾಜೆ ಸಹಕಾರ ಸಂಘದ ಸಭಾಂಗಣದಲ್ಲಿ ನಡೆಯಿತು.
ಜೆಡಿಎಸ್ ಜಿಲ್ಲಾಧ್ಯಕ್ಷ ಸಂಕೇತ್ ಪೂವಯ್ಯ ಮಾತನಾಡಿ, ಶಾಸಕರು ಹಾಗೂ ಸಂಸದರು ಸಂಪಾಜೆ ವ್ಯಾಪ್ತಿಯನ್ನು ನಿರ್ಲಕ್ಷಿಸಿದ್ದು, ಈ ಭಾಗದಲ್ಲಿರುವ ರೈತರ, ಜನರ ನೋವಿಗೆ ಸ್ಪಂದಿಸುತ್ತಿಲ್ಲ. ಆದ್ದರಿಂದ ಜನತೆ ಬದಲಾವಣೆ ಬಯಸಿದ್ದು, ಜೆಡಿಎಸ್ ಪಕ್ಷವನ್ನು ಚುನಾವಣೆಯಲ್ಲಿ ಬೆಂಬಲಿಸಿದ್ದಲ್ಲಿ ಜೆಡಿಎಸ್ ಸರಕಾರ ರೈತರ ಹಾಗೂ ಜನಸಾಮಾನ್ಯರ ಸಂಕಷ್ಟಕ್ಕೆ ಸ್ಪಂದಿಸುವ ಕೆಲಸ ಮಾಡಲಿದೆ ಎಂದರು.
ಜೆಡಿಎಸ್ ಜಿಲ್ಲಾ ಮಹಿಳಾ ಘಟಕದ ಉಪಾಧ್ಯಕ್ಷೆ ಲೀಲಾವತಿ ಜಯಪ್ರಕಾಶ್ ಮಾತನಾಡಿ, ಜೆಡಿಎಸ್ ಸರಕಾರದ ಅವಧಿಯಲ್ಲಿ ಸಾಕಷ್ಟು ರೈತಪರ ಕೆಲಸಗಳು ನಡೆದಿದ್ದು, ಜಿಲ್ಲೆಯಲ್ಲಿ ರೈತರ ನೋವಿಗೆ ತಕ್ಷಣ ಸ್ಪಂದಿಸುವ ಕೆಲಸವನ್ನು ವೀರಾಜಪೇಟೆ ಕ್ಷೇತ್ರದ ಅಭ್ಯರ್ಥಿ, ಜೆಡಿಎಸ್ ಜಿಲ್ಲಾಧ್ಯಕ್ಷರಾದ ಸಂಕೇತ್ ಪೂವಯ್ಯ ಅವರು ಮಾಡುತ್ತಿದ್ದಾರೆ. ಮತದಾರರು ಈ ಬಾರಿ ಜೆಡಿಎಸ್‍ಗೆ ಬೆಂಬಲ ನೀಡಲಿ ದ್ದಾರೆ. ಈ ನಿಟ್ಟಿನಲ್ಲಿ ಕಾರ್ಯಕರ್ತರು ಶ್ರಮಿಸುವಂತೆ ಕರೆ ನೀಡಿದರು.
ಜೆಡಿಎಸ್ ರಾಜ್ಯ ಉಪಾಧ್ಯಕ್ಷರಾದ ಹೊಸೂರು ಸತೀಶ್ ಜೋಯಪ್ಪ ಮಾತನಾಡಿ, ಜಿಲ್ಲೆಯಲ್ಲಿ ಜೆಡಿಎಸ್ ಬಲವರ್ಧನೆಗೊಳ್ಳುತ್ತಿದ್ದು, ಜೆಡಿಎಸ್ ಅಭ್ಯರ್ಥಿಗಳು ಈ ಬಾರಿ ಗೆಲುವು ಸಾಧಿಸಲಿ ದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ವೇದಿಕೆಯಲ್ಲಿ ಜೆಡಿಎಸ್ ಪದಾಧಿಕಾರಿಗಳಾದ ಇಸಾಕ್‍ಖಾನ್, ಆರ್.ಡಿ. ಆನಂದ್, ಮನ್ಸೂರ್ ಅಲಿ, ಆದಂ ಕುಂಞ, ಸಂತ್ಯಾರ್, ಪಾಣತ್ತಲೆ ವಿಶ್ವನಾಥ್, ಪಿ.ಎನ್. ಅಬ್ದುಲ್ಲಾ, ಲಲಿತಾ ಭಾಸ್ಕರ್, ಭುವನೇಶ್ವರ್, ತಿರುಮಲ ಸೋನಾ ಮತ್ತಿತರರು ಇದ್ದರು.