ಕುಶಾಲನಗರ, ಮಾ. 16: ಕುಶಾಲನಗರದ ಮಾತೆ ಕಾವೇರಿ ಆರತಿ ಬಳಗ ಮತ್ತು ಕುಶಲ ಅರ್ಚಕರ ಸಂಘದ ಸಂಯುಕ್ತಾಶ್ರಯದಲ್ಲಿ ಲೋಕ ಕಲ್ಯಾಣಕ್ಕಾಗಿ ರುದ್ರಹೋಮ ಕಾರ್ಯಕ್ರಮ ತಾ. 17ರಂದು (ಇಂದು) ಕುಶಾಲನಗರದಲ್ಲಿ ಹಮ್ಮಿಕೊಳ್ಳಲಾಗಿದೆ.

ಸ್ಥಳೀಯ ಅಯ್ಯಪ್ಪಸ್ವಾಮಿ ದೇವಾಲಯ ಬಳಿ ಕಾವೇರಿ ನದಿ ತಟದಲ್ಲಿ ಬೆಳಿಗ್ಗೆ 11 ಗಂಟೆಯಿಂದ ನಡೆಯುವ ಕಾರ್ಯಕ್ರಮದಲ್ಲಿ ಕಿರಿಕೊಡ್ಲಿ ಮಠದ ಶ್ರೀ ಸದಾಶಿವ ಸ್ವಾಮೀಜಿ ಅವರು ದಿವ್ಯ ಸಾನ್ನಿಧ್ಯ ವಹಿಸುವರು.