ಸೋಮವಾರಪೇಟೆ,ಮಾ.16: ತಾ. 19ರಂದು ಸ್ಥಳೀಯ ಲಯನ್ಸ್ ಸಂಸ್ಥೆಗೆ ಜಿಲ್ಲಾ ಗವರ್ನರ್ ಭೇಟಿ ನೀಡಲಿದ್ದಾರೆ ಎಂದು ಸಂಸ್ಥೆಯ ಕಾರ್ಯದರ್ಶಿ ಎಂ.ಎ. ಹರೀಶ್ ತಿಳಿಸಿದ್ದಾರೆ.
ಅಂದು ಸಂಜೆ 7ಕ್ಕೆ ಇಲ್ಲಿನ ಒಕ್ಕಲಿಗರ ಸಮುದಾಯ ಭವನದಲ್ಲಿ ನಡೆಯುವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಲಯನ್ಸ್ ಅಧ್ಯಕ್ಷ ಎ.ಎಸ್. ಮಹೇಶ್ ವಹಿಸಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಇಲ್ಲಿನ ಸಾರ್ವಜನಿಕ ಆಸ್ಪತ್ರೆಗೆ ಶೀಥಲೀಕರಣದ ಶವ ಪೆಟ್ಟಿಗೆಯನ್ನು ಲಯನ್ಸ್ ಸಂಸ್ಥೆಯಿಂದ ಉಚಿತವಾಗಿ ನೀಡುತ್ತಿದ್ದು, ಅಂದು ಪೂರ್ವಾಹ್ನ 11 ಗಂಟೆಗೆ ಜೇಸಿ ವೇದಿಕೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಅವರು ಆಸ್ಪತ್ರೆಯ ವೈದ್ಯಾಧಿಕಾರಿಗಳಿಗೆ ಹಸ್ತಾಂತರಿಸಲಿದ್ದಾರೆ ಎಂದರು.