ಗೋಣಿಕೊಪ್ಪ ವರದಿ, ಮಾ. 16: ಉಚಿತ ಮತ್ತು ಕಡ್ಡಾಯ ಶಿಕ್ಷಣ ಕಾಯ್ದೆ ಅಡಿಯಲ್ಲಿ ವೀರಾಜಪೇಟೆ ತಾಲೂಕಿನ 33 ಶಾಲೆಗಳ 267 ಸೀಟುಗಳ ದಾಖಲಾತಿಗೆ ಪ್ರವೇಶಾತಿ ಅರ್ಜಿಯನ್ನು ತಾ. 21 ರೊಳಗೆ ಶಿಕ್ಷಣ ಇಲಾಖೆಯ ಅನ್‍ಲೈನ್ ಪೋರ್ಟಲ್ ಮೂಲಕ ಸಲ್ಲಿಸಲು ಅವಕಾಶವಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ತಿಳಿಸಿದ್ದಾರೆ.
ಪ್ರಸ್ತುತ ಸಾಲಿನಲ್ಲಿ ಎಲ್‍ಕೆಜಿ ಹಾಗೂ 1ನೇ ತರಗತಿಗೆ ತಾಲೂಕಿನ ಅನುದಾನ ರಹಿತ ಖಾಸಗಿ ಶಾಲೆಗಳಲ್ಲಿ ಸೀಟುಗಳು ಲಭ್ಯವಿದೆ. ವಿದ್ಯಾರ್ಥಿಗಳ ಪೋಷಕರು ಅವಕಾಶವನ್ನು ಬಳಕೆ ಮಾಡಿಕೊಳ್ಳಬಹುದು. ಅರ್ಜಿ ಸಲ್ಲಿಸುವ ಸಂದರ್ಭ ಮಗುವಿನ ಹಾಗೂ ಪೋಷಕರ ಆಧಾರ್ ಸಂಖ್ಯೆ, ಹೆಸರು, ಜನ್ಮ ದಿನಾಂಕ, ಲಿಂಗ ಮತ್ತು ವಿಳಾಸದ ಮಾಹಿತಿಯನ್ನು ಆನ್‍ಲೈನ್ ಅರ್ಜಿ ಸಲ್ಲಿಸುವ ವೇಳೆ ಒದಗಿಸಬೇಕು. ಹಿಂದುಳಿದ ವರ್ಗದ ವಿದ್ಯಾರ್ಥಿಗಳು ಜಾತಿ ಮತ್ತು ಆದಾಯದ ಪ್ರಮಾಣ ಪತ್ರ. ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ ಮತ್ತು ಪ್ರವರ್ಗ-1 ಆಗಿದ್ದಲ್ಲಿ ಜಾತಿ ದೃಢೀಕರಣ ಪತ್ರ ನೀಡಬೇಕು. ಎಲ್.ಕೆ.ಜಿ. ತರಗತಿಗೆ 3 ವರ್ಷ 10 ತಿಂಗಳಿಂದ 4 ವರ್ಷ 10 ತಿಂಗಳು, 1 ನೇ ತರಗತಿಗೆ 5 ವರ್ಷ 10 ತಿಂಗಳಿಂದ 6 ವರ್ಷ 10 ತಿಂಗಳು ವಯೋಮಿತಿಯ ವಿದ್ಯಾರ್ಥಿಗಳಿಗೆ ಅವಕಾಶವಿದೆ ಎಂದು ಮಾಹಿತಿ ನೀಡಿದ್ದಾರೆ. ಹೆಚ್ಚಿನ ಮಾಹಿತಿಗೆ 94806 95262, 90082 01755 ಸಂಪರ್ಕಿಸಲು ಕೋರಲಾಗಿದೆ.