ಗೋಣಿಕೊಪ್ಪಲು, ಮಾ. 16: ಇಲ್ಲಿನ ಕಾವೇರಿ ಎಜುಕೇಷನ್ ಸೊಸೈಟಿ ಹಾಗೂ ಗೋಣಿಕೊಪ್ಪಲು ಕಾವೇರಿ ಕಾಲೇಜು ಸುವರ್ಣ ಮಹೋತ್ಸವ ವರ್ಷಾಚರಣೆಯ ಪ್ರಯುಕ್ತ ಕಾವೇರಿ ಎಜುಕೇಷನ್ ಸೊಸೈಟಿಯ ಅದೀನದಲ್ಲಿರುವ ಕಾಲೇಜುಗಳ ಸಂಯುಕ್ತ ಆಶ್ರಯದಲ್ಲಿ ತಾ. 19 ರಂದು ಬೆಳಿಗ್ಗೆ 9.30 ಕ್ಕೆ ಮಹಿಳಾ ದಿನಾಚರಣೆಯನ್ನು ಆಚರಿಸಲಾಗುತ್ತಿದ್ದು ಜಿಲ್ಲಾಮಟ್ಟದ ಅಂತರ ಕಾಲೇಜು ಮಹಿಳಾ ಸಿಬ್ಬಂದಿಗಳ ಸಾಂಸ್ಕøತಿಕ ಹಬ್ಬವನ್ನು ಆಯೋಜಿಸಲಾಗಿದೆ. ಹಬ್ಬದಲ್ಲಿ ಮಹಿಳಾ ಸಿಬ್ಬಂದಿಗಳಿಗಾಗಿ ಗುಂಪು ಜನಪದ ಗೀತೆ ಹಾಗೂ ಗುಂಪು ಜನಪದ ನೃತ್ಯ ಸ್ಪರ್ಧೆಯನ್ನು ನಡೆಸಲಾಗುತ್ತದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ನಿರ್ದೇಶಕಿ ಡಾ. ಜೆ. ಪೊನ್ನಮ್ಮ ಮಾಚಯ್ಯ ವಹಿಸಲಿದ್ದು, ಮುಖ್ಯ ಅತಿಥಿಯಾಗಿ ಮೈಸೂರಿನ ತಲಕಾವೇರಿ ಮಹಿಳಾ ವಿದ್ಯಾಸಂಸ್ಥೆಯ ಸ್ಥಾಪಕ ಅಧ್ಯಕ್ಷೆ ಡಾ. ನಳಿನಿ ತಮ್ಮಯ್ಯ ಭಾಗವಹಿಸಲಿದ್ದಾರೆ.