ಮಡಿಕೇರಿ, ಮಾ. 16: ಚಂದ್ರಮಾನ ಯುಗಾದಿ ಹಬ್ಬದ ಪ್ರಯುಕ್ತ ಭಾಗಮಂಡಲ ಶ್ರೀ ಭಗಂಡೇಶ್ವರ ದೇವಾಲಯದಲ್ಲಿ ತಾ. 18 ರಂದು ಬೆಳಿಗ್ಗೆ 9 ಗಂಟೆಯಿಂದ ಶ್ರೀ ಮಹಾ ಗಣಪತಿ ಪೂಜೆ, ಶ್ರೀ ಭಗಂಡೇಶ್ವರ, ಮಹಾವಿಷ್ಣು ಹಾಗೂ ಸುಬ್ರಮಣ್ಯ ದೇವರಿಗೆ ವಿಶೇಷ ಪೂಜೆ ಮತ್ತು ಮಧ್ಯಾಹ್ನ 12.30 ಗಂಟೆಗೆ ಮಹಾ ಮಂಗಳಾರತಿ, ಪ್ರಸಾದ ವಿನಿಯೋಗ ಪೂಜಾ ಕಾರ್ಯಗಳು ನಡೆಯಲಿವೆ.
ಜೀವನದಿ ತಲಕಾವೇರಿಯಲ್ಲಿ ಅಂದು ಬೆಳಿಗ್ಗೆ 9 ಗಂಟೆಯಿಂದ ಮಹಾ ಗಣಪತಿ ಪೂಜೆ, ಶ್ರೀ ಅಗಸ್ತ್ಯೆಶ್ವರ ಸನ್ನಿಧಿಯಲ್ಲಿ ಸಹಸ್ರ ನಾಮಾರ್ಚನೆ ಮತ್ತು ಮಧ್ಯಾಹ್ನ 12 ಗಂಟೆಗೆ ಮಹಾ ಪೂಜೆ ಹಾಗೂ ಪ್ರಸಾದ ವಿನಿಯೋಗ ಕಾರ್ಯಕ್ರಮಗಳು ನಡೆಯಲಿದೆ ಎಂದು ದೇವಾಲಯದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಬಿ.ಎಸ್.ತಮ್ಮಯ್ಯ ತಿಳಿಸಿದ್ದಾರೆ.