ಮಡಿಕೇರಿ, ಮಾ. 19: ಮೂರ್ನಾಡು ವಿದ್ಯಾಸಂಸ್ಥೆ ಮೂರ್ನಾಡು ಪ್ರಥಮ ದರ್ಜೆ ಕಾಲೇಜು, ಮಂಗಳೂರು ವಿವಿ ಆಶ್ರಯದಲ್ಲಿ ತಾ. 21 ಹಾಗೂ 22 ರಂದು ಅಂತರ ಕಾಲೇಜು ಮಹಿಳಾ ವಾಲಿಬಾಲ್ ಪಂದ್ಯಾವಳಿ ಏರ್ಪಡಿಸಲಾಗಿದೆ.
ಬಾಚೆಟ್ಟಿರ ಲಾಲು ಮುದ್ದಯ್ಯ ಕ್ರೀಡಾಂಗಣ ನಡೆಯುವ ಕಾರ್ಯಕ್ರಮವನ್ನು ದಾನಿಗಳಾದ ಬಾಚೆಟ್ಟಿರ ಲಾಲು ಮುದ್ದಯ್ಯ ಹಾಗೂ ಕಮಲು ಮುದ್ದಯ್ಯ ಉದ್ಘಾಟಿಸುವರು. ಮುಖ್ಯ ಅತಿಥಿಗಳಾಗಿ ಮೂರ್ನಾಡು ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲೆ ಪ್ರೊ. ಪಿ.ಎ. ಭಾಗೀರತಿ ಆಗಮಿಸುವರು. ಮೂರ್ನಾಡು ವಿದ್ಯಾಸಂಸ್ಥೆ ಅಧ್ಯಕ್ಷ ಬಾಚೆಟ್ಟಿರ ಜಿ. ಮಾದಪ್ಪ ಅಧ್ಯಕ್ಷತೆ ವಹಿಸುವರು.
ಸಮಾರೋಪ ಸಮಾರಂಭ ತಾ. 22 ರಂದು ಸಂಜೆ 5 ಗಂಟೆಗೆ ನಡೆಯುವ ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಬೆಳೆಗಾರ ಶಿವಚಾಳಿಯಂಡ ಅಂಬಿ ಕಾರ್ಯಪ್ಪ, ಮೂರ್ನಾಡು ವಿದ್ಯಾಸಂಸ್ಥೆ ಕಾರ್ಯದರ್ಶಿ ಚೌರಿರ ಪೆಮ್ಮಯ್ಯ ಭಾಗವಹಿಸುವರು.