ಮಡಿಕೇರಿ, ಮಾ.19 : ಕ್ರೀಡಾಕೂಟದ ಮೂಲಕ ದಲಿತ ಯುವ ಸಮೂಹವನ್ನು ಒಗ್ಗೂಡಿಸುವ ಉದ್ದೇಶದಿಂದ ದಲಿತ ಸಂಘರ್ಷ ಸಮಿತಿ ವತಿಯಿಂದ “ದಲಿತ ಕ್ರಿಕೆಟ್ ಕಪ್” ಕ್ರೀಡಾ ಕೂಟವನ್ನು ನಡೆಸಲು ನಿರ್ಧರಿಸಲಾಗಿದೆ ಎಂದು ಸಮಿತಿಯ ಜಿಲ್ಲಾ ಸಂಚಾಲಕರಾದ ಹೆಚ್.ಎಲ್.ದಿವಾಕರ್ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು

ಇದೇ ಏ.2 ರಿಂದ 13 ರವರೆಗೆ ಮಡಿಕೇರಿಯ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಕ್ರೀಡಾಕೂಟವನ್ನು ನಡೆಸಲಾಗುತ್ತಿದ್ದು, ಸುಮಾರು 50 ಕ್ಕೂ ಹೆಚ್ಚಿನ ತಂಡಗಳು ಪಾಲ್ಗೊಳ್ಳುವ ನಿರೀಕ್ಷೆ ಇದೆ. ಸಮಾರೋಪ ಸಮಾರಂಭ, ಬಹುಮಾನ ವಿತರಣೆ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯನ್ನು ಏ.14 ರಂದು ನಗರದ ಕಾವೇರಿ ಕಲಾಕ್ಷೇತ್ರದಲ್ಲಿ ನಡೆಸಲಾಗುವದು. ಈ ಕಾರ್ಯಕ್ರಮದಲ್ಲಿ ಅತಿಥಿ ಗಣ್ಯರು ವಿಜೇತ ತಂಡಗಳಿಗೆ ಬಹುಮಾನ ವಿತರಿಸಲಿದ್ದಾರೆ. ಇದೇ ಸಂದರ್ಭ ಸಾಮಾಜಿಕ ಕ್ಷೇತ್ರದಲ್ಲಿ ಅಪಾರ ಸೇವೆ ಸಲ್ಲಿಸಿದ ಅರ್ಹರೊಬ್ಬರಿಗೆ “ಕೊಡಗು ದಲಿತ ರತ್ನ” ಪ್ರಶಸ್ತಿಯನ್ನು ಕೂಡ ನೀಡಲಾಗುವದು ಎಂದು ದಿವಾಕರ್ ತಿಳಿಸಿದರು.

ಕ್ರಿಕೆಟ್, ಕಬ್ಬಡ್ಡಿ ಹಾಗೂ ವಾಲಿಬಾಲ್ ಪಂದ್ಯಾವಳಿಯಲ್ಲಿ ಪಾಲ್ಗೊಳ್ಳುವ ತಂಡಗಳು ತಾ.25 ರೊಳಗೆ ಹೆಸರನ್ನು ನೋಂದಾಯಿಸಿ ಕೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ : 9481523648, 9611766713 ನ್ನು ಸಂಪರ್ಕಿ ಸಬಹುದಾಗಿದೆ. ಸುದ್ದಿಗೋಷ್ಠಿಯಲ್ಲಿ ತಾಲೂಕು ಸಂಘಟನಾ ಸಂಚಾಲಕ ಎ.ಪಿ.ದೀಪಕ್ ಹಾಗೂ ಮೇಕೇರಿ ಸಂಚಾಲಕ ಪೊನ್ನಪ್ಪ ಉಪಸ್ಥಿತರಿದ್ದರು.