ನಾಪೆÇೀಕ್ಲು, ಮಾ. 19: ಮೇ ತಿಂಗಳಲ್ಲಿ ನಡೆಯುವ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಅಧಿಕಾರಕ್ಕೆ ಬರಲಿದೆ ಎಂದು ಜಿಲ್ಲಾ ಜೆಡಿಎಸ್ ಅಧ್ಯಕ್ಷ ಮತ್ತು ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಮೇರಿಯಂಡ ಸಂಕೇತ್ ಪೂವಯ್ಯ ವಿಶ್ವಾಸ ವ್ಯಕ್ತಪಡಿಸಿದರು.

ನಾಪೆÇೀಕ್ಲು ಚೆರಿಯಪರಂಬುವಿನ ಶಾದಿ ಮಹಲ್‍ನಲ್ಲಿ ಆಯೋಜಿಸಲಾಗಿದ್ದ ಜೆಡಿಎಸ್ ಸಮಾವೇಶದಲ್ಲಿ ಅವರು ಮಾತನಾಡಿದರು. ಗ್ರಾಮೀಣ ಪ್ರದೇಶದ ಜನರ ಮೂಲಭೂತ ಸಮಸ್ಯೆಗಳಿಗೆ ಸ್ಪಂಧಿಸಿ ರಾಜ್ಯವನ್ನು, ಗ್ರಾಮವನ್ನು ಅಭಿವೃದ್ಧಿ ಪಥದತ್ತ ಕೊಂಡೊಯುವದೇ ಜೆಡಿಎಸ್‍ನ ಮುಖ್ಯ ಗುರಿಯಾಗಿದೆ.

ಜಿಲ್ಲೆಯಲ್ಲಿ ಕಾಡಾನೆ, ಹುಲಿ ಧಾಳಿಗೆ ಹಲವಾರು ಅಮಾಯಕರು ಪ್ರಾಣವನ್ನು ಕಳೆದುಕೊಂಡಿದ್ದಾರೆ. ರಾಜ್ಯದ ಅರಣ್ಯ ಮಂತ್ರಿಗಳು ಈ ಬಗ್ಗೆ ಯಾವದೇ ಪ್ರತಿಕ್ರಿಯೆ ನೀಡಿಲ್ಲ ಸರಕಾರ ಇವರಿಗೆ ಪರಿಹಾರ ನೀಡದೆ ವಂಚಿಸಿದೆ ಎಂದು ಆರೋಪಿಸಿದರು. ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಹೊಸೂರು ಸತೀಶ್ ಜೋಯಪ್ಪ ಮಾತನಾಡಿ, ಬಿಜೆಪಿ ಮತ್ತು ಕಾಂಗ್ರೆಸ್ ಒಂದು ನಾಣ್ಯದ ಎರಡು ಮುಖಗಳು ಎಂದು ಟೀಕಿಸಿದರು. ಸಭೆಯಲ್ಲಿ ಪರಿಶಿಷ್ಟ ಪಂಗಡದ ಅಧ್ಯಕ್ಷ ರಾಜಾರಾವ್, ಜಿಲ್ಲಾ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಇಸಾಕ್ ಖಾನ್, ಬಿ.ಎಸ್.ಪಿ.ಯ ನಾಯಕ ಮೊಣ್ಣಪ್ಪ, ಕೆ.ಎಂ.ಬಿ. ಗಣೇಶ್ ಮತ್ತಿತರರು ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವೀರಾಜಪೇಟೆ ತಾಲೂಕು ಅಲ್ಪ ಸಂಖ್ಯಾತ ಘಟಕದ ಅಧ್ಯಕ್ಷ ಪಿ.ಎಂ. ರಷೀದ್ ವಹಿಸಿದ್ದರು. ವೇದಿಕೆಯಲ್ಲಿ ರಾಜ್ಯ ಜೆ.ಡಿ.ಎಸ್. ಸಂಘಟನಾ ಕಾರ್ಯದರ್ಶಿ ಎಂ.ಎ. ಮನ್ಸೂರ್ ಅಲಿ, ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಮತೀನ್, ನಾಯ ಕರಾದ ಪಾಣತ್ತಲೆ ವಿಶ್ವನಾಥ್, ಕುಡಿಯರ ಮುತ್ತಪ್ಪ, ವಲಯ ಜೆ.ಡಿ.ಎಸ್. ಅಧ್ಯಕ್ಷ ಜಿ.ಎ. ಪದ್ಮರಾಜ್, ನಾಸೀರ್, ಸುಲೈಮಾನ್, ಜಾಶಿರ್ ಮೂರ್ನಾಡು, ಎಂ.ಎಸ್. ಇಬ್ರಾಹಿಂ, ಬಿ.ಎಸ್.ಪಿ. ಜಿಲ್ಲಾಧ್ಯಕ್ಷ ಪ್ರೇಮ್‍ಕುಮಾರ್, ಯುವ ಘಟಕದ ಅಧ್ಯಕ್ಷ ಮೋಹನ್ ಮೌರ್ಯ, ಮತ್ತಿತರರು ಇದ್ದರು.