ಮಡಿಕೇರಿ, ಮಾ. 20: ಯೋಜನೆ, ಸಾಂಖ್ಯಿಕ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಂ.ಆರ್ ಸೀತಾರಾಂ ಅವರು ತಾ. 21 ಮತ್ತು 22 ರಂದು ಜಿಲ್ಲೆಯ ವಿವಿಧ ಕಾಮಗಾರಿಗಳನ್ನು ಉದ್ಘಾಟಿಸಲಿ ದ್ದಾರೆ.

21 ರಂದು ಬೆಳಿಗ್ಗೆ 11 ಗಂಟೆಗೆ ತಿತಿಮತಿಗೆ ಆಗಮಿಸಿ ಐಟಿಡಿಪಿ ಇಲಾಖೆ ವತಿಯಿಂದ ನಿರ್ಮಾಣ ಮಾಡಿರುವ ಆಶ್ರಮ ಶಾಲೆಯ ಹೆಚ್ಚುವರಿ ಕಟ್ಟಡ ಉದ್ಘಾಟಿಸಲಿದ್ದಾರೆ. ಮಧ್ಯಾಹ್ನ 12 ಗಂಟೆಗೆ ವೀರಾಜಪೇಟೆಗೆ ಆಗಮಿಸಿ ವೀರಾಜಪೇಟೆಯ ಬಸ್ ನಿಲ್ದಾಣದ ಬಳಿ ಇಂದಿರಾ ಕ್ಯಾಂಟಿನ್ ಕಟ್ಟಡ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಲಿದ್ದಾರೆ. 1 ಗಂಟೆಗೆ ಇಗ್ಗುತ್ತಪ್ಪ ದೇವಸ್ಥಾನ ರಸ್ತೆ ಉದ್ಘಾಟನೆ ಮಾಡಲಿದ್ದಾರೆ.

ಬಳಿಕ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಮಧ್ಯಾಹ್ನ 3.30 ಗಂಟೆಗೆ ವಿಕಲಚೇತನರಿಗೆ ಗಾಲಿ ಚಕ್ರ ವಿತರಣೆ ಮಾಡಲಿದ್ದಾರೆ. 3.40ಕ್ಕೆ ಅಪಘಾತ ಜೀವ ರಕ್ಷಕ ಯೋಜನೆ ಯಡಿ ತರಬೇತಿ ಪಡೆದ ವಾಹನ ಚಾಲಕರಿಗೆ ಪ್ರಥಮ ಚಿಕಿತ್ಸಾ ಕಿಟ್ ವಿತರಿಸಲಿದ್ದಾರೆ. 3.50ಕ್ಕೆ ಯುವ ಜನ ಸೇವಾ ಮತ್ತು ಕ್ರೀಡಾ ಇಲಾಖೆ ವತಿಯಿಂದ ಕ್ರೀಡಾಪಟುಗಳಿಗೆ ಕ್ರೀಡಾ ಕಿಟ್ ವಿತರಣೆ ಮಾಡಲಿದ್ದಾರೆ. ಸಂಜೆ 4 ಗಂಟೆಗೆ ಜಿಲ್ಲಾ ಖನಿಜಾ ಪ್ರತಿಷ್ಠಾನ ಸಭೆ ನಡೆಸಲಿದ್ದಾರೆ. ಸಂಜೆ 4.30ಕ್ಕೆ ಮುಖ್ಯಮಂತ್ರಿ ಅನಿಲ ಭಾಗ್ಯ ಯೋಜನೆಯಡಿ ಫಲಾನುಭವಿಗಳ ಆಯ್ಕೆ ಪಟ್ಟಿಗೆ ಅನುಮೋದನೆ ನೀಡುವ ಬಗ್ಗೆ ಸಮಿತಿ ಸಭೆ ನಡೆಸಲಿದ್ದಾರೆ. ಬಳಿಕ ಸಂಜೆ 5 ಗಂಟೆಗೆ ಪತ್ರಿಕಾ ಗೋಷ್ಠಿ ನಡೆಸಲಿದ್ದಾರೆ.

22 ರಂದು ಬೆಳಿಗ್ಗೆ 10 ಗಂಟೆಗೆ ನಗರದಲ್ಲಿ ನೂತನವಾಗಿ ನಿರ್ಮಿಸಿರುವ ಇಂದಿರಾ ಕ್ಯಾಂಟಿನ್ ಉದ್ಘಾಟನೆ ಮಾಡಲಿದ್ದಾರೆ. 10.30ಕ್ಕೆ ಖಾಸಗಿ ಬಸ್ ನಿಲ್ದಾಣ ಉದ್ಘಾಟನೆ ನೆರವೇರಿಸಲಿದ್ದಾರೆ. 11 ಗಂಟೆಗೆ ಎಫ್.ಎಂ.ಕೆ.ಎಂ.ಸಿ ಕಾಲೇಜು ಬಳಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ವತಿಯಿಂದ ನಿರ್ಮಿ ಸಿರುವ ಬಾಲಕಿಯರ ಬಾಲಮಂದಿರ ನೂತನ ಕಟ್ಟಡ ಉದ್ಘಾಟಿಸಲಿದ್ದಾರೆ. ಬೆಳಿಗ್ಗೆ 11.15 ಗಂಟೆಗೆ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಪ್ರಾಯೋಜಕತ್ವದಲ್ಲಿ ಜಿಲ್ಲಾ ಸ್ತ್ರೀಶಕ್ತಿ ಒಕ್ಕೂಟಕ್ಕೆ ನೀಡಿರುವ ಸವಿರುಚಿ ಮೊಬೈಲ್ ಕ್ಯಾಂಟಿನ್‍ಗೆ ಚಾಲನೆ ನೀಡಲಿದ್ದಾರೆ. 11.30 ಗಂಟೆಗೆ ನಗರದ ನಗರಸಭೆ ವತಿಯಿಂದ ನಿರ್ಮಿಸ ಲಾಗಿರುವ ನೂತನ ಮಾರುಕಟ್ಟೆಯ ಉದ್ಘಾಟನೆ ನೆರವೇರಿಸಲಿದ್ದಾರೆ. 12.45 ಗಂಟೆಗೆ ಕುಶಾಲನಗರ ಬಿ.ಜಿ.ಎಸ್. ಸರ್ಕಲ್ ಬಳಿ ಆಯು ರ್ವೇದ ಮತ್ತು ಹೊಮಿಯೋಪತಿ ಸಂಯುಕ್ತ ಆಸ್ಪತ್ರೆ ಉದ್ಘಾಟಿಸಲಿದ್ದಾರೆ. ಮಧ್ಯಾಹ್ನ 2.15 ಗಂಟೆಗೆ ಕೂಡಿಗೆ-ಕೋವರ್‍ಕೊಲ್ಲಿ ರಸ್ತೆ ಉದ್ಘಾಟನೆ ಮಾಡಲಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವರ ಆಪ್ತ ಕಾರ್ಯದರ್ಶಿ ಮಂಡೋನ್ಸಾ ಅವರು ತಿಳಿಸಿದ್ದಾರೆ.