ವೀರಾಜಪೇಟೆ, ಮಾ. 20: ಭಾರತ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ. ಅಂಬೇಡ್ಕರ್‍ರ 127 ನೇ ಜನ್ಮ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಅಚರಿಸುವ ಉದ್ದೇಶದಿಂದ ದಲಿತ ಸಂಘರ್ಷ ಸಮಿತಿಯ ಎಲ್ಲಾ ಘಟಕಗಳ ಸದಸ್ಯರ ಪೂರ್ವಭಾವಿ ಸಭೆ ತಾ. 21ರಂದು ತಿತಿಮತಿ ಸಮುದಾಯ ಭವನದಲ್ಲಿ ಏರ್ಪಡಿಸಲಾಗಿದೆ ಎಂದು ಜಿಲ್ಲಾ ಸಂಘಟನಾ ಸಂಚಾಲಕ ರಜನಿಕಾಂತ್ ತಿಳಿಸಿದ್ದಾರೆ.