ಸೋಮವಾರಪೇಟೆ,ಮಾ.20: ಸಮೀಪದ ಬೇಳೂರು ಗ್ರಾಮ ಪಂಚಾಯಿತಿಯ ಬಜೆಗುಂಡಿ ಗ್ರಾಮದಲ್ಲಿ 35 ಲಕ್ಷ ವೆಚ್ಚದಲ್ಲಿ ಕೈಗೊಳ್ಳಲಾಗಿರುವ ನೂತನ ಕಾಂಕ್ರೀಟ್ ರಸ್ತೆಯನ್ನು ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಉದ್ಘಾಟಿಸಿದರು.

ಈ ಸಂದರ್ಭ ಜಿ.ಪಂ. ಮಾಜೀ ಅಧ್ಯಕ್ಷ ಬಿ. ಶಿವಪ್ಪ, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬಿ.ಡಿ. ಮಂಜುನಾಥ್, ಗ್ರಾ.ಪಂ. ಸದಸ್ಯರುಗಳಾದ ಯೋಗೇಂದ್ರ, ಹರೀಶ್, ಪಾಂಚಜನ್ಯ ಯುವ ಸೇನೆಯ ಅಧ್ಯಕ್ಷ ಪ್ರಶಾಂತ್, ಪ್ರಮುಖರಾದ ಅಜೀಶ್‍ಕುಮಾರ್ ಸೇರಿದಂತೆ ಇತರರು ಉಪಸ್ಥಿತರಿದ್ದರು.