*ಗೋಣಿಕೊಪ್ಪಲು, ಮಾ. 21: ತಿತಿಮತಿ ಮರೂರು ಗಿರಿಜನ ಆಶ್ರಮ ಶಾಲೆಯ ನೂತನವಾಗಿ ನಿರ್ಮಾಣ ವಾದ ಮಕ್ಕಳ ಮಲಗುವ ಕೊಠಡಿ ಹಾಗೂ ಊಟದ ಕೋಣೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಸೀತಾರಾಂ ಉದ್ಟಾಟಿಸಿದರು.

ಒಂದು ಕೋಟಿ ತೊಂಬತ್ತಮೂರು ಲಕ್ಷ ರೂಪಾಯಿ ಅನುಧಾನದಲ್ಲಿ ಕಾಮಗಾರಿ ನಡೆದಿದೆ. ಇದೇ ರೀತಿ ಆಶ್ರಮ ಶಾಲೆಯ ವಿದ್ಯಾರ್ಥಿಗಳಿಗೆ ಸರ್ಕಾರದಿಂದ ಹಲವು ಸೌಲಭ್ಯಗಳನ್ನು ನೀಡಲಾಗುತ್ತಿದೆ. ಇದನ್ನು ಸದ್ಬಳಕೆ ಮಾಡಿಕೊಂಡು ಉತ್ತಮ ಅಂಕ ಗಳೊಂದಿಗೆ ತೇರ್ಗಡೆಯಾಗಿ, ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂದು ಈ ಸಂದರ್ಭ ಹೇಳಿದರು.

ಶಾಸಕ ಕೆ.ಜಿ. ಬೋಪಯ್ಯ ಮಾತನಾಡಿ, ಸರ್ಕಾರ ಹಲವು ಸೌಲಭ್ಯಗಳನ್ನು ಒದಗಿಸಿಕೊಟ್ಟರೂ ಮಕ್ಕಳು ಇದನ್ನು ಸದ್ಬಳಕೆ ಮಾಡಿ ಕೊಳ್ಳುತ್ತಿಲ್ಲ. ಪೆÇೀಷಕರು ಈ ಮಾಹಿತಿ ಅರಿತು ಸರ್ಕಾರದ ಸೌಲಭ್ಯಗಳನ್ನು ಪಡೆದುಕೊಳ್ಳಲು ಸರ್ಕಾರಿ ಶಾಲೆಗಳಿಗೆ ಮಕ್ಕಳನ್ನು ಸೇರಿಸಬೇಕು ಎಂದು ಸಲಹೆ ನೀಡಿದರು. ಈ ಸಂದರ್ಭ ಜಿ.ಪಂ. ಅಧ್ಯಕ್ಷ ಹರೀಶ್, ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷ ಮೂಕೊಂಡ ವಿಜು ಸುಬ್ರಮಣಿ, ಜಿ.ಪಂ. ಸದಸ್ಯೆ ಪಂಕಜ, ತಿತಿಮತಿ ಗ್ರಾ.ಪಂ ಅಧ್ಯಕ್ಷ ಶಿವುಕುಮಾರ್, ಮಾಜಿ ಎಂ.ಎಲ್.ಸಿ. ಅರುಣ್ ಮಾಚಯ್ಯ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಶಿವು ಮಾದಪ್ಪ, ಜಿಲ್ಲಾ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರ, ತಾಲೂಕು ಕಾರ್ಯ ನಿರ್ವಹಣಾಧಿಕಾರಿ ಜಯಣ್ಣ, ಪರಿಶಿಷ್ಟ ವರ್ಗ ಕಲ್ಯಾಣ ಇಲಾಖೆ ಅಧಿಕಾರಿ ಚಂದ್ರಶೇಖರ್ ಹಾಜರಿದ್ದರು.