ಮಡಿಕೇರಿ, ಮಾ. 21: ಸರಕಾರಿ ಪ್ರಥಮ ದರ್ಜೆ ಕಾಲೇಜು, ಮಡಿಕೇರಿಯ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ ಅಂತರ ಮಹಿಳಾ ದಿನ ಆಚರಿಸಲಾಯಿತು. ಕಾರ್ಯಕ್ರಮದ ಬಗ್ಗೆ ಕಾಲೇಜಿನ ಇತಿಹಾಸ ವಿಭಾಗದ ಪ್ರಾಧ್ಯಾಪಕ ಪ್ರೊ. ಶಶಿಧರ ತಮ್ಮ ಪ್ರಸ್ತ್ತಾವಿಕ ಭಾಷಣದಲ್ಲಿ, ರಾಷ್ಟ್ರ ಹಾಗೂ ಅಂತರ್ರಾಷ್ಟ್ರೀಯ ಮಟ್ಟದಲ್ಲಿ ಸಾಧನೆಗೈದಿರುವ ಮಹಿಳೆಯರ ಬಗ್ಗೆ ಗುಣಗಾನ ಮಾಡಿದರು. ಇಂದಿರ ಗಾಂಧಿ, ಕಲ್ಪನಾ ಚಾವ್ಲಾ ಮೊದಲಾದವರ ಜೀವನ ಸಾಧನೆ ಉಳಿದ ಸ್ತ್ರೀ ಸಮುದಾಯಕ್ಕೆ ಮಾದರಿಯಾಗಿದೆ ಎಂದು ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಿದರು.

ಕಾಲೇಜಿನ ಉಪನ್ಯಾಸಕ ನಂಜುಂಡ ಸ್ವಾಮಿ ಮಾತನಾಡಿ, ಸಮಾಜದಲ್ಲಿ ಸ್ತ್ರೀಯರ ಪಾತ್ರದ ಬಗ್ಗೆ ತಿಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲೆ ಪ್ರೊ. ಚಿತ್ರಾ ವೈ. ವಹಿಸಿದ್ದು, ಸ್ತ್ರೀ ಸಮುದಾಯ ದವರು ಪ್ರಸ್ತುತ ದಿನಗಳಲ್ಲಿ ಉತ್ತಮ ಕೌಟುಂಬಿಕ ಹಾಗೂ ಸಾಮಾಜಿಕ ಜೀವನವನ್ನು ನಡೆಸುತ್ತಿದ್ದಾರೆ ಎಂದರು. ಕಾರ್ಯಕ್ರಮವನ್ನು ರಾಜ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಪ್ರೊ. ಕೆ.ಪಿ. ಕುಸುಮ ನಿರೂಪಿಸಿ, ಸ್ವಾಗತಿಸಿದರು. ಕಾರ್ಯಕ್ರಮದಲ್ಲಿ ಕಾಲೇಜಿನಲ್ಲಿ ಎಲ್ಲಾ ಪ್ರಾಧ್ಯಾಪಕರು, ಉಪನ್ಯಾಸಕರು, ವಿದ್ಯಾರ್ಥಿಗಳು ಹಾಜರಿದ್ದರು.