ಸುಂಟಿಕೊಪ್ಪ, ಮಾ.21 : ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿ ದಿಬ್ಬಕ್ಕೆ ಡಿಕ್ಕಿ ಹೊಡೆದು ಚಾಲಕನ ನಿಯಂತ್ರಣಕ್ಕೆ ಬಾರದೆ ಕಾರು ರಸ್ತೆಗೆ ಮಗುಚಿಕೊಂಡಿದ್ದು ಚಾಲಕ ಸೇರಿದಂತೆ ಮೂವರು ಗಾಯಗೊಂಡ ಘಟನೆ ಸುಂಟಿಕೊಪ್ಪ ಸಮೀಪದ ಶಾಂತಿಗೇರಿ ತಿರುವಿನಲ್ಲಿ ನಡೆದಿದೆ.

ಕುಶಾಲನಗರದಿಂದ ಮಡಿಕೇರಿ ಕಡೆಗೆ ತೆರಳುತ್ತಿದ್ದ ಕಾರು ( ಕೆಎ 03 ಎಎಫ್ 1285) ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಬದಿಯ ಬರೆಗೆ ಡಿಕ್ಕಿಯಾಗಿ ಪಲ್ಟಿ ಹೊಡೆದು ಮಗುಚಿಗೊಂಡಿದೆ. ಪರಿಣಾಮ ಕಾರಿನ ಚಾಲಕ ಸೇರಿದಂತೆ ಮೂವರಿಗೆ ಗಾಯಗೊಂಡು ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಸುಂಟಿಕೊಪ್ಪ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ಭಾಗದಲ್ಲಿ ಆಗಾಗ್ಗೆ ಅಪಘಾತ ಸಂಭವಿಸುತ್ತಿದ್ದು, ಹಲವಾರು ಪ್ರಯಾಣಿಕರು ಪ್ರಾಣವನ್ನು ಕಳೆದುಕೊಂಡಿದ್ದಾರೆ. ಸಂಬಂಧಿಸಿದ ಇಲಾಖೆಯವರು, ಜಿಲ್ಲಾಧಿಕಾರಿಗಳು ಈ ಭಾಗದಲ್ಲಿ ರಸ್ತೆ ಉಬ್ಬು ಅಥವಾ ಬ್ಯಾರಿಕೇಡ್ ಆಳವಡಿಸುವ ಮೂಲಕ ಮುಂದಾಗುವ ಅನಾಹುತವನ್ನು ತಪ್ಪಿಸಲಿ ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.