ಮಡಿಕೇರಿ, ಮಾ.21: ಎಸ್.ಎಸ್.ಎಲ್.ಸಿ ಪರೀಕ್ಷೆಯು ತಾ. 23ರಿಂದ ಏಪ್ರಿಲ್ 6ರವರೆಗೆ (ರಜಾ ದಿನಗಳನ್ನು ಹೊರತುಪಡಿಸಿ) ಜಿಲ್ಲೆಯ 27 ಕೇಂದ್ರಗಳಲ್ಲಿ ನಡೆಯಲಿದ್ದು, ಪರೀಕ್ಷೆಗಳನ್ನು ಸುಸೂತ್ರವಾಗಿ ನಡೆಸಲು ಹಾಗೂ ಪಾವಿತ್ರ್ಯತೆ ಕಾಪಾಡುವ ನಿಟ್ಟಿನಲ್ಲಿ ಪರೀಕ್ಷಾ ಕೇಂದ್ರಗಳ ಸುತ್ತಲಿನ 200ಮೀ ಸುತ್ತಳತೆಯುಳ್ಳ ಪ್ರದೇಶವನ್ನು ದಂಡ ಪ್ರಕ್ರಿಯಾ ಸಂಹಿತೆ 1973ರ ಕಲಂ 144ರಡಿ ನಿಷೇಧಿತ ಪ್ರದೇಶವೆಂದು ಹಾಗೂ ಈ ಆದೇಶವು ಪರೀಕ್ಷಾ ದಿನಗಳಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 5.30 ಗಂಟೆಯವರೆಗೆ ಮಾತ್ರ ಚಾಲ್ತಿಯಲ್ಲಿರುತ್ತದೆ ಎಂದು ಜಿಲ್ಲಾಧಿಕಾರಿ ಪಿ.ಐ.ಶ್ರೀವಿದ್ಯಾ ಅವರು ಆದೇಶಿಸಿದ್ದಾರೆ.