ಮೂರ್ನಾಡು, ಮಾ. 21: ಮೂರ್ನಾಡು ವಿದ್ಯಾಸಂಸ್ಥೆಯ ಪದವಿ ಕಾಲೇಜಿನ ವತಿಯಿಂದ ಆಯೋಜಿಸಲಾದ 2017-18ನೇ ಸಾಲಿನ ಮಂಗಳೂರು ವಿಶ್ವವಿದ್ಯಾನಿಲಯದ ಅಂತರ ಪದವಿ ಕಾಲೇಜಿನ ಮಹಿಳೆಯರ ವಾಲಿಬಾಲ್ ಪಂದ್ಯಾಟವನ್ನು ದಾನಿ ಬಾಚೆಟ್ಟಿರ ಲಾಲು ಮುದ್ದಯ್ಯ ಉದ್ಘಾಟಿಸಿದರು.
ಮೂರ್ನಾಡು ವಿದ್ಯಾಸಂಸ್ಥೆಯ ಕ್ರೀಡಾಂಗಣದಲ್ಲಿ 2 ದಿನಗಳ ಕಾಲ ನಡೆಯುವ ವಾಲಿಬಾಲ್ ಪಂದ್ಯಾಟದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ವಿದ್ಯಾಸಂಸ್ಥೆಯ ಅಧ್ಯಕ್ಷ ಬಾಚೆಟ್ಟಿರ ಮಾದಪ್ಪ ಮಾತನಾಡಿ, ಕ್ರೀಡಾ ಮನೋಭಾವನೆಯಿಂದ ಕ್ರೀಡೆಯಲ್ಲಿ ಭಾಗವಹಿಸಿ ಸದುಪಯೋಗ ಪಡೆದುಕೊಳ್ಳಬೇಕೆಂದರು. ಈ ಸಂದರ್ಭ ದಾನಿ ಕಮಲು ಮುದ್ದಯ್ಯ, ವಿದ್ಯಾಸಂಸ್ಥೆ ಉಪಾಧ್ಯಕ್ಷ ಪಳಂಗಂಡ ಮುದ್ದಪ್ಪ, ಕಾರ್ಯದರ್ಶಿ ಚೌರೀರ ಎಂ. ಪೆಮ್ಮಯ್ಯ, ನಿರ್ದೇಶಕರಾದ ಬಡುವಂಡ ಸುಬ್ರಮಣಿ, ಪೆಮ್ಮುಡಿಯಂಡ ವೇಣು ಅಪ್ಪಣ್ಣ, ವೀರಾಜಪೇಟೆ ಟವರ್ಸ್ ಕ್ಲಬ್ ಅಧ್ಯಕ್ಷ ಅಂಜಪರವಂಡ ಅನಿಲ್ ಮಂದಣ್ಣ, ಮೂರ್ನಾಡು ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲೆ ಪಿ.ಎಂ. ದೇವಕಿ ಇತರರು ಹಾಜರಿದ್ದರು.