ವೀರಾಜಪೇಟೆ, ಮಾ. 21: ವೀರಾಜಪೇಟೆಯ ಕಾವೇರಿ ಶಾಲೆಯಲ್ಲಿ ಯು.ಕೆ.ಜಿ. ವಿಭಾಗದ ಪದವಿ ಪ್ರದಾನ ಸಮಾರಂಭ ಮತ್ತು ಹತ್ತನೇ ತರಗತಿಯ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಏರ್ಪಡಿಸಲಾಗಿತ್ತು. ಅಧ್ಯಕ್ಷತೆಯನ್ನು ಶಾಲೆಯ ಆಡಳಿತ ಮಂಡಳಿ ಗೌರವ ಕಾರ್ಯದರ್ಶಿ ಮುಕ್ಕಾಟಿರ ಮುತ್ತಣ್ಣ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಕೊಡಗು ಜಿಲ್ಲಾ ಪಂಚಾಯಿತಿ ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷ ಮುಕೊಂಡ ಶಶಿ ಸುಬ್ರಮಣಿ ಆಗಮಿಸಿ ಮಾತನಾಡಿ, ಮಕ್ಕಳು ತಮ್ಮ ಉಜ್ವಲ ಭವಿಷ್ಯಕ್ಕಾಗಿ ಹೇಗೆ ದೃಢಸಂಕಲ್ಪ ಮತ್ತು ಆತ್ಮ ವಿಶ್ವಾಸ ಬೆಳೆಸಿಕೊಳ್ಳಬೇಕು ಎಂದು ಹಿತನುಡಿಗಳನ್ನು ಹೇಳಿದರು.

ಸಮಾರಂಭದಲ್ಲಿ ಆಡಳಿತ ಮಂಡಳಿ ಅಧ್ಯಕ್ಷೆ, ಪ್ರಾಂಶುಪಾಲರು, ಶಿಕ್ಷಕ ವೃಂದದವರು, ವಿದ್ಯಾರ್ಥಿಗಳು ಹಾಗೂ ಪೋಷಕರು ಹಾಜರಿದ್ದರು.