ಸೋಮವಾರಪೇಟೆ, ಮಾ. 21: ಸರ್ವರಿಗೂ ವಿದ್ಯುತ್ ನೀಡುವ “ಸೌಭಾಗ್ಯ” ಯೋಜನೆ ಜಾರಿಯಲ್ಲಿದ್ದು, ಫಲಾನುಭವಿಗಳು ಯೋಜನೆಯ ಸದುಪಯೋಗ ಪಡೆಯಬೇಕೆಂದು ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ತಿಳಿಸಿದ್ದಾರೆ.
ಪ್ರಧಾನಮಂತ್ರಿಗಳ ಸೌಭಾಗ್ಯ ಯೋಜನೆಯಡಿಯಲ್ಲಿ ಸರ್ವರಿಗೂ ವಿದ್ಯುತ್ ನೀಡುವ ಸಲುವಾಗಿ ವಿದ್ಯುತ್ ರಹಿತ ವಾಸದ ಮನೆಗಳಿಗೆ ವಿದ್ಯುತ್ ಕಲ್ಪಿಸಲು ಯೋಜಿಸಲಾಗಿದ್ದು, ಫಲಾನುಭವಿಗಳನ್ನು ಗುರುತಿಸಲು ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ಉಪವಿಭಾಗದ ಸೋಮವಾರಪೇಟೆ ಕಚೇರಿಯಲ್ಲಿ ತಾ. 16 ರಿಂದ 31 ರವರೆಗೆ ನೋಂದಣಿ ಕಾರ್ಯ ಹಮ್ಮಿಕೊಳ್ಳಲಾಗಿದೆ.
ಯೋಜನೆ ಸದುಪಯೋಗ ಪಡೆಯಲು ಆಧಾರ್ ಕಾರ್ಡ್, ಬಿ.ಪಿ.ಎಲ್. ಅಥವಾ ಎ.ಪಿ.ಎಲ್. ಕಾರ್ಡ್, ಬ್ಯಾಂಕ್ ಖಾತೆ ವಿವರ, ಚುನಾವಣಾ ಗುರುತಿನ ಚೀಟಿ ಹಾಗೂ ಇತ್ತೀಚಿನ ಭಾವಚಿತ್ರದೊಂದಿಗೆ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕು ಎಂದು ಶಾಸಕ ರಂಜನ್ ತಿಳಿಸಿದ್ದಾರೆ.