ವೀರಾಜಪೇಟೆ, ಮಾ. 21: ವೀರಾಜಪೇಟೆ ಬ್ಲಾಕ್ ಕಾಂಗ್ರೆಸ್ ವತಿಯಿಂದ ಇಲ್ಲಿನ ಪುರಭವನದಲ್ಲಿ ಹೊಗೆ ಮುಕ್ತ ಯೋಜನೆಯಲ್ಲಿ ಫಲಾನುಭವಿಗಳಿಗೆ ಅನಿಲ ಸಿಲಿಂಡರ್‍ಗಳ ಕಿಟ್‍ನ್ನು ಅರಣ್ಯ ಅಭಿವೃದ್ಧಿ ನಿಗಮದ ಉಪಾಧ್ಯಕ್ಷೆ ಪದ್ಮಿನಿ ಪೊನ್ನಪ್ಪ ವಿತರಿಸಿದರು.

ಸಭೆಯನ್ನುದ್ದೇಶಿಸಿ ಎಂ.ಎಸ್. ಪೂವಯ್ಯ, ಜಿ.ಜಿ. ಮೋಹನ್. ತಾಲೂಕು ಪಂಚಾಯಿತಿ ಸದಸ್ಯ ಮಾಳೇಟಿರ ಪ್ರಶಾಂತ್ ಮಾತನಾಡಿದರು. ತಾಲೂಕು ಪಂಚಾಯಿತಿ ಸದಸ್ಯರಾದ ಚಿಣ್ಣಮ್ಮ, ಆಶಾ ಜೇಮ್ಸ್. ಬ್ಲಾಕ್ ಉಪಾಧ್ಯಕ್ಷ ಪಿ.ಎ. ಹನೀಫ್, ವಿನಿತಾ ಕಾವೇರಮ್ಮ, ಮತ್ತಿತರರು ಉಪಸ್ಥಿತರಿದ್ದರು.

ಅಧ್ಯಕ್ಷತೆಯನ್ನು ಬ್ಲಾಕ್ ಅಧ್ಯಕ್ಷ ಆರ್.ಕೆ. ಅಬ್ದುಲ್ ಸಲಾಂ ಮಾತನಾಡಿದರು. 210 ಫಲಾನುಭವಿಗಳಿಗೆ ಅಡುಗೆ ಅನಿಲದ ಕಿಟ್‍ಗಳನ್ನು ವಿತರಿಸಲಾಯಿತು. ಎಂ.ಎಂ. ಶಶಿಧರ್ ನಿರೂಪಿಸಿದರು.