ಸೋಮವಾರಪೇಟೆ, ಮಾ. 22: ಪಿಕ್‍ಅಪ್‍ನಲ್ಲಿ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಪತ್ತೆಹಚ್ಚಿದ ಸೋಮವಾರಪೇಟೆ ಪೊಲೀಸ್ ವೃತ್ತನಿರೀಕ್ಷಕ ನಂಜುಂಡೇಗೌಡ ಅವರು, ವಾಹನ ಸಹಿತ ಈರ್ವರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಮಾದಾಪುರದ ಜಂಬೂರು ಹೊಳೆಯಿಂದ ಅಕ್ರಮವಾಗಿ ಮರಳನ್ನು ತೆಗೆದು ಪಿಕ್‍ಅಪ್ (ಕೆ.ಎ.12 ಬಿ.5603)ವಾಹನದಲ್ಲಿ ಸಾಗಾಟಗೊಳಿಸುತ್ತಿದ್ದ ಮಾದಾಪುರದ ಶ್ರೀಜಿತ್ ಮತ್ತು ಜಯರಾಂ ಅವರುಗಳನ್ನು ವಶಕ್ಕೆ ಪಡೆದು ಮೊಕದ್ದಮೆ ದಾಖಲಿಸಿದ್ದಾರೆ.

ಈರ್ವರು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ರಾತ್ರಿ ವೇಳೆ ಮಾದಾಪುರದಲ್ಲಿ ಗಸ್ತು ತಿರುಗುತ್ತಿದ್ದ ವೃತ್ತನಿರೀಕ್ಷಕ ನಂಜುಂಡೇಗೌಡ ಹಾಗೂ ಪೊಲೀಸ್ ಪೇದೆ ಮಂಜುನಾಥ್ ಅವರುಗಳು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.